ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಬಸ್‌ ಸಂಚಾರ ಆರಂಭ, ವಿದ್ಯಾರ್ಥಿವೇತನಕ್ಕೆ ಆಗ್ರಹ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ
Last Updated 17 ಸೆಪ್ಟೆಂಬರ್ 2021, 13:05 IST
ಅಕ್ಷರ ಗಾತ್ರ

ವಿಜಯಪುರ: ವಿದ್ಯಾರ್ಥಿಗಳ ವಿವಿಧ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿಜಯಪುರ ಮಹಾನಗರ ಘಟಕದ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ನಗರದ ದರಬಾರ್‌ ಕಾಲೇಜಿನಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಪ್ರತಿಭಟನಾ ಜಾಥಾ ನಡೆಸಿದ ಬಳಿಕ ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ ಅವರಿಗೆ ಮನವಿ ಸಲ್ಲಿಸಲಾಯಿತು.

ಜಿಲಾ ಸಂಚಾಲಕ ‌ಬಸವರಾಜ ಪೂಜಾರಿ ಮಾತನಾಡಿ, ಕೋವಿಡ್‌ ಕಾರಣಕ್ಕೆ ಬದಲಾದ ತರಗತಿಗಳ ಸಮಯಕ್ಕೆ ಸರಿಯಾಗಿ ಹಾಜರಾಗಲು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ. ಲಾಕ್‌ಡೌನ್‌ ಕಾರಣಕ್ಕೆ ಸ್ಥಗಿತಗೊಂಡ ಬಸ್‌ಗಳು ಇನ್ನು ಆರಂಭಗೊಂಡಿಲ್ಲ. ಕೂಡಲೇ ಬಸ್‌ ಸಂಚಾರ ಆರಂಭ ಮಾಡಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ಎಲ್ಲ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ವಿದ್ಯಾಸಿರಿ ಶಿಷ್ಯವೇತನ ಸೇರಿದಂತೆ ವಿದ್ಯಾರ್ಥಿವೇತನವನ್ನು ತಕ್ಷಣಕ್ಕೆ ಬಿಡುಗಡೆಗೊಳಿಸಬೇಕು ಮತ್ತು ವಿದ್ಯಾರ್ಥಿಗಳ ಅಧ್ಯಯನಕ್ಕೆ ಪ್ರೋತ್ಸಾಹಿಸಲು ವಿದ್ಯಾರ್ಥಿವೇತನದ ಮೊತ್ತವನ್ನು ಹೆಚ್ಚಳ ಮಾಡಬೇಕು ಹಾಗೂ ಜಿಲ್ಲೆಯ ಅನೇಕ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಹಾಸ್ಟೆಲ್‌ಗಳಿಗೆ ಅವಲಂಬಿತವಾಗಿರುವುದರಿಂದ ವಿದ್ಯಾರ್ಥಿಗಳ ಅನುಗುಣವಾಗಿ ವಸತಿನಿಲಯಗಳ ಸಂಖ್ಯೆ ಹೆಚ್ಚು ಮಾಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು.

ನಗರ ಸಹಕಾರ್ಯದರ್ಶಿ ಮಹಾಂತೇಶ ಕಂಬಾರ, ನಗರ ಎಸ್.ಎಫ್.ಡಿ ಪ್ರಮುಖ ಮಾಳು, ಸಿದ್ದು ಉಪ್ಪಾರ, ಮಲ್ಲಿಕಾರ್ಜುನ ಮಾಳಿ, ಚಂದ್ರಕಾಂತ, ನಚಿಕೇತ, ಕೃಷ್ಣಾ ಸಿಂದಗಿ, ಕಿರಣ, ನಾಗರಾಜ ಬಟಗೇರಾ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT