ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿಜಯಪುರ: ಕ್ಯಾಂಟರ್ ಅಡ್ಡಗಟ್ಟಿ ₹ 32 ಲಕ್ಷ ದರೋಡೆ

Published 18 ಮೇ 2024, 15:47 IST
Last Updated 18 ಮೇ 2024, 15:47 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯ ಕೊಲ್ಹಾರ ಪಟ್ಟಣದ ಬಳಿ ಶುಕ್ರವಾರ ರಾತ್ರಿ ದರೋಡೆಕೋರರು ಹುಬ್ಬಳ್ಳಿ–ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕ್ಯಾಂಟರ್‌ ಅಡ್ಡಗಟ್ಟಿ, ಅದರಲ್ಲಿದ್ದ ಚಾಲಕ, ನಿರ್ವಾಹಕನ ಕಣ್ಣಿಗೆ ಖಾರದ ಪುಡಿ ಎರಚಿ, ಹಲ್ಲೆ ನಡೆಸಿ, ₹32 ಲಕ್ಷವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.

ಕಲಬುರ್ಗಿ ಜಿಲ್ಲೆ ಜೀವರ್ಗಿ ಪಟ್ಟಣದ ಹತ್ತಿ ವ್ಯಾಪಾರಿ ಚಂದ್ರಕಾಂತ ಕುಂಬಾರ ಅವರಿಗೆ ಸೇರಿದ ಹತ್ತಿಯನ್ನು ಕ್ಯಾಂಟರ್ ಚಾಲಕ ಮಹಾಂತೇಶ ಕುಂಬಾರ ಹಾಗೂ ಸಹಾಯಕ ಮಲ್ಲು ಕೊಡಚಿ ಅವರು ಧಾರವಾಡ ತಾಲ್ಲೂಕಿನ ಅಮ್ಮಿನಭಾವಿ ಜಿನ್ನಿಂಗ್‌ಗೆ ತೆಗೆದುಕೊಂಡು ಹೋಗಿ, ಮಾರಾಟ ಮಾಡಿ, ಹಣ ತೆಗೆದುಕೊಂಡು ವಾಪಸ್ ಜೀವರ್ಗಿಗೆ ತೆರಳುತ್ತಿದ್ದ ವೇಳೆ ಈ ಕೃತ್ಯ ನಡೆದಿದೆ.

ಬುಲೆರೋ ವಾಹನದಲ್ಲಿ ಬಂದ ದರೋಡೆಕೋರರು ಕ್ಯಾಂಟರ್‌ ಅಡ್ಡಗಟ್ಟಿ, ನಂತರ ಕ್ಯಾಂಟರ್ ಮುಂಭಾಗದ ಗಾಜಿಗೆ ಕಲ್ಲು, ರಾಡ್‌ನಿಂದ ಹೊಡೆದು ಜಖಂಗೊಳಿಸಿದ್ದಾರೆ. ಕಣ್ಣಿಗೆ ಖಾರದ ಪುಡಿ ಎರಚಿ ದರೋಡೆ ಮಾಡಿ, ಪರಾರಿಯಾಗಿದ್ದಾರೆ.

ದರೋಡೆಕೋರರಿಂದ ಹಲ್ಲೆಗೀಡಾದ ಮಹಾಂತೇಶ ಹಾಗೂ ಮಲ್ಲು ಕೊಡಚಿಗೆ ಕೊಲ್ಹಾರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. 

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ದರೋಡೆಕೋರರ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT