ವಿಜಯಪುರ: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ಶಿಫಾರಸಿನಂತೆ ಒಳ ಮೀಸಲಾತಿ ಜಾರಿಗೆ ತಂದಿರುವುದು ಅವೈಜ್ಞಾನಿಕ ಎಂದು ಮಾಜಿ ಶಾಸಕ ಮನೋಹರ ಐನಾಪುರ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಒಳ ಮೀಸಲಾತಿಗೆ ಅವಕಾಶವೇ ಇಲ್ಲ. ಆದರೂ ರಾಜ್ಯ ಬಿಜೆಪಿ ಸರ್ಕಾರ ಒಳಮೀಸಲಾತಿ ಜಾರಿಗೆ ತರುವ ಮೂಲಕ ಸಮಾಜ ಒಡೆಯುವ ಕೆಲಸ ಮಾಡಿದೆ ಎಂದರು.
ಈ ಬಗ್ಗೆ ನ್ಯಾಯಾಲಯದ ಮೊರೆ ಹೋಗುತ್ತೇವೆ. ಚುನಾವಣೆ ಲಾಭ ಪಡೆಯಲು ಬಿಜೆಪಿ ಹವಣಿಸಿದೆ. ಇದರಿಂದ ಲಂಬಾಣಿ, ಕೊರಮ, ಕೊರಚ, ಭೋವಿ ಸಮುದಾಯಗಳಿಗೆ ಅನ್ಯಾಯವಾಗಲಿದೆ. ಈ ಚುನಾವಣೆಯಲ್ಲಿ ಬಿಜೆಪಿಗೆ ವೋಟ್ ಹಾಕುವುದಿಲ್ಲ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.