ಶನಿವಾರ, 9 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ ಎಸ್.ಪಿ ವಿರುದ್ಧ ಚಲವಾದಿ ಆಕ್ರೋಶ

Published 30 ಸೆಪ್ಟೆಂಬರ್ 2023, 16:21 IST
Last Updated 30 ಸೆಪ್ಟೆಂಬರ್ 2023, 16:21 IST
ಅಕ್ಷರ ಗಾತ್ರ

ಮುದ್ದೇಬಿಹಾಳ: ಕೋಲಾರದಲ್ಲಿ ನಡೆದ ಜನತಾದರ್ಶನ ಕಾರ್ಯಕ್ರಮದಲ್ಲಿ ಕೋಲಾರ ಸಂಸದ ಎಸ್. ಮುನಿಸ್ವಾಮಿ ಅವರ ಜೊತೆ ಅನುಚಿತವಾಗಿ ವರ್ತಿಸಿ, ಜನಪ್ರತಿನಿಧಿ ಎನ್ನುವ ಕನಿಷ್ಠ ಸೌಜನ್ಯವನ್ನೂ ತೋರದೆ ಅವರ ಮೇಲೆ ದಬ್ಬಾಳಿಕೆ ನಡೆಸಿ, ಸಭೆಯಿಂದ ಹೊರಹಕಾಲು ಯತ್ನಿಸಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರದ ಏಜೆಂಟ್‌ರಂತೆ ವರ್ತಿಸಿರುವ ಎಸ್‌.ಪಿ ನಾರಾಯಣ್ ಅವರ ಕೃತ್ಯವನ್ನು ಬಿಜೆಪಿ ಎಸ್.ಸಿ ಮೋರ್ಚಾ ಸಾಮಾಜಿಕ ಜಾಲತಾಣದ ರಾಜ್ಯ ಸಂಚಾಲಕ ಮಂಜುನಾಥ್ ಛಲವಾದಿ ಖಂಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಎಂಟು ವಿಧಾನಸಭಾ ಕ್ಷೇತ್ರಗಳನ್ನು ಪ್ರತಿನಿಧಿಸುವ ಏಕೈಕ ದಲಿತ ಸಂಸದರ ಮೇಲಿನ ದೌರ್ಜನ್ಯ ದೇಶದ ದಲಿತರಿಗೆ ಮಾಡಿದ ಅಪಮಾನವಾಗಿದೆ. ಈ ಘಟನೆ ಪ್ರಜಾಪ್ರಭುತ್ವ, ಸಂವಿಧಾನ ವಿರೋಧಿ ಧೋರಣೆಯಾಗಿದೆ. ಈ ಘಟನೆಯಿಂದ ಕಾಂಗ್ರೆಸ್ ಪಕ್ಷವು ದಲಿತರ ಬಗ್ಗೆ ಹೊಂದಿರುವ ತಾತ್ಸಾರ ಮನೋಭಾವವನ್ನು ಬಿಂಬಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT