ಬಸವನಬಾಗೇವಾಡಿ: ಕೋಟ್ಯಂತರ ಭಾರತೀಯರ ಜನರ ಕನಸು ನನಸು ಮಾಡಿದ ಚಂದ್ರಯಾನ-3 ಯಶಸ್ವಿಯಾಗಿ ಲ್ಯಾಂಡಿಂಗ್ ಆಗಿದ್ದಕ್ಕೆ ಬಹಳ ಹೆಮ್ಮೆಯಾಗಿದೆ ಎಂದು ಜವಳಿ ಮತ್ತು ಕಬ್ಬು ಅಭಿವೃದ್ಧಿ ಸಕ್ಕರೆ ನಿರ್ದೇಶನಾಲಯ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಚಂದ್ರಯಾನ 3 ಯಶಸ್ವಿಯಾಗಿ ಲ್ಯಾಂಡಿಂಗ್ ಆಗಿದ್ದಕ್ಕೆ ಬುಧವಾರ ಸಂಜೆ ಪಟ್ಟಣದಲ್ಲಿ ಸಚಿವರು ತಮ್ಮ ಬೆಂಬಲಿಗರೊಂದಿಗೆ ಪರಸ್ಪರ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ ನಂತರ ಮಾತನಾಡಿದರು.
ರಾಷ್ಟ್ರೀಯ ಬಸವ ಸೈನ್ಯ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಭರತ್ ಅಗರವಾಲ, ಜೀವನ ಮ್ಯಾಗೇ,ರಿ ಬಸವರಾಜ ನಾಯ್ಕೋಡಿ, ಅನಿಲ ಪವಾರ, ಶಿವಾನಂದ ತೊಳನೂರ, ಬಸವರಾಜ ಚಿಂಚೋಳಿ, ಪ್ರವೀಣ ಪಾಟೀಲ, ಶಿವು ಮಡಿಕೇಶ್ವರ, ಕೊಟ್ರೇಶಿ ಹೆಗಡ್ಯಾಳ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.