ವಿಜಯಪುರ: ನಗರದ ವಿವಿಧ ಬಡಾವಣೆಗಳಲ್ಲಿ ಕೊರೊನಾ ಸೋಂಕು ಹರಡದಂತೆ ತಡೆಗಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಮಹಾನಗರ ಪಾಲಿಕೆಯ ಅಧಿಕಾರಿಗಳು, ಪೌರ ಕಾರ್ಮಿಕರು, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರ ಕುಟುಂಬಗಳಿಗೆ ನಾಗಠಾಣ ಶಾಸಕ ಡಾ. ದೇವಾನಂದ ಚವ್ಹಾಣ ಆಹಾರ ಧಾನ್ಯದ ಕಿಟ್, ಮಾಸ್ಕ್ ಸ್ಯಾನಿಟೈಸರ್ ವಿತರಿಸಿದರು.

‘ಕೊರೊನಾ ಎರಡನೇ ಅಲೆ ಎಲ್ಲರನ್ನೂ ಬಹಳಷ್ಟು ತೊಂದರೆಗೊಳಪಡಿಸಿದೆ. ಆದರೂ ಯಾರೂ ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು. ನಾನು ಸದಾ ನಿಮ್ಮೊಂದಿಗಿದ್ದೇನೆ’ ಎಂದು ಧೈರ್ಯ ತುಂಬಿದರು.

‘ಸಂಕಷ್ಟದಲ್ಲಿರುವವರಿಗೆ ಜನರು ಸಹಾಯ ಮಾಡಬೇಕು. ಎಲ್ಲ ದಾನಕ್ಕಿಂತ ಅನ್ನ ದಾನ ಶ್ರೇಷ್ಠವಾಗಿದೆ’ ಎಂದು ಹೇಳಿದರು.

ವಿಜಯಪುರ ತಹಶೀಲ್ದಾರ್ ಸಿದ್ದರಾಯ ಬೋಸಗಿ, ತಾಲ್ಲೂಕು ಆರೋಗ್ಯ ಅಧಿಕಾರಿ ಕವಿತಾ ದೊಡ್ಡಮನಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಸವರಾಜ್ ಜಗಳೂರು, ವೈದ್ಯಾಧಿಕಾರಿ ಜಯಶ್ರೀ ಮಸಳಿ, ಮದಿಯ ಇಟಗಿ, ಸತ್ಯಸಾಯಿಬಾಬಾ ಸಂಸ್ಥೆಯ ಅಧ್ಯಕ್ಷ ಡಿ. ಎಚ್. ಜಾಧವ ಚೆನ್ನಪ್ಪ, ಕಲ್ಲಪ್ಪ ಹಿಪ್ಪರಗಿ, ಮನೋಜ್, ಬಾಬು ಕುಚನೂರ, ಮಲ್ಲಿಕಾರ್ಜುನ ಹಿಪ್ಪರಗಿ, ಶಿವು ಹಿರೇಕುರುಬರ, ಗುಲಾಬ್ ಚವಾಣ್, ರವಿ ಚವಾಣ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.