ವಿಜಯಪುರ: ‘ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜುಲೈ 9 ರಂದು ಇಂಡಿ ಪಟ್ಟಣಕ್ಕೆ ಆಗಮಿಸಿ ₹ 4 ಸಾವಿರ ಕೋಟಿಗೂ ಹೆಚ್ಚಿನ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ, ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ’ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ತಿಳಿಸಿದರು.

ಇಂಡಿ ಮಿನಿ ವಿಧಾನಸೌಧದಲ್ಲಿ ಗುರುವಾರ ಆಯೋಜಿಸಿದ್ದ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

‘ಇಂಡಿ ತಾಲ್ಲೂಕಿನಲ್ಲಿ ಕೈಗೊಂಡಿರುವ 19 ಕೆರೆ ತುಂಬುವ ಯೋಜನೆ, ತಿಡಗುಂದಿ ಏತ ನೀರಾವರಿ ವಿಸ್ತರಣೆ, ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಕಾಮಗಾರಿ ಹಂತ 2 ಮತ್ತು 3, ತಡವಲಗಾ ಕೆಜಿಬಿವಿ ಶಾಲಾ ಕಟ್ಟಡ ನಿರ್ಮಾಣ, ಕಾರ್ಮಿಕರ ಮಕ್ಕಳಿಗಾಗಿ ವಸತಿ ಶಾಲೆ, ಮೌಲಾನಾ ಅಬ್ದುಲ್ ಕಲಾಂ ವಸತಿ ಶಾಲೆ, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ತಾಂತ್ರಿಕ ಶಿಕ್ಷಣ ಇಲಾಖೆ ಹೆಚ್ಚುವರಿ ಕೊಠಡಿಗಳ ಕಾಮಗಾರಿ, ಝಳಕಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಿರಗಿ ಗ್ರಾಮದ ಪಶು ಆಸ್ಪತ್ರೆ ಉದ್ಘಾಟನೆ, ಇಂಡಿ ತಾಲ್ಲೂಕಿನ ಲಾಳಸಂಗಿ ಕೆರೆ ಸುಧಾರಣೆ, ಲೋಕೋಪಯೋಗಿ ಇಲಾಖೆ ಕಾಮಗಾರಿಗಳು, ಲಚ್ಯಾಣ ಗ್ರಾಮದ ಬಾಲಕರ ವಸತಿ ನಿಲಯ ನಿರ್ಮಾಣ, ವಿವಿಧ ಸಮುದಾಯ ಭವನಗಳ ನಿರ್ಮಾಣ, ಸಿಸಿ ರಸ್ತೆ ಕಾಮಗಾರಿ, ಮೆಘಾ ಮಾರುಕಟ್ಟೆ ಲೋಕಾರ್ಪಣೆ ಮಾಡಲಿದ್ದಾರೆ’ ಎಂದರು.

‘ಮಿರಗಿ ಗ್ರಾಮದ ಹಳ್ಳಕ್ಕೆ ಬ್ರಿಜ್-ಕಂ-ಬ್ಯಾರೇಜ್ ನಿರ್ಮಾಣದ ಭೂಮಿ ಪೂಜೆ, ತಾಲ್ಲೂಕು ಕ್ರೀಡಾಂಗಣದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿಪೂಜೆ, ಪ್ರಗತಿ ಪಥ ಯೋಜನೆ ರಸ್ತೆ ಕಾಮಗಾರಿಗೆ ಭೂಮಿಪೂಜೆ ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ, ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ’ ಎಂದು ತಿಳಿಸಿದರು.

‘ಇಂಡಿ ಪಟ್ಟಣದ ಪೊಲೀಸ್ ಗ್ರೌಂಡ್ನಲ್ಲಿ ಆಯೋಜಿಸುವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಲು ಶ್ರಮಿಸಬೇಕು. ಸಂಬಂಧಿಸಿದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆ ವ್ಯಾಪ್ತಿಯ ಯೋಜನೆ-ಕಾರ್ಯಕ್ರಮಗಳ ಕುರಿತು ಪೂರ್ವ ತಯಾರಿ ಮಾಡಿಕೊಂಡು, ಕಾಮಗಾರಿಗಳ ಕುರಿತು ಸಮಗ್ರವಾದ ವರದಿ ಸಿದ್ಧಪಡಿಸಿ, ಅಧಿಕಾರಿಗಳು ಆಸಕ್ತಿಯಿಂದ ಕಾರ್ಯನಿರ್ವಹಿಸಿ ಕಾರ್ಯಕ್ರಮ ಯಶಸ್ಸಿಗೆ ಶ್ರಮಿಸಬೇಕು’ ಎಂದು ಹೇಳಿದರು.

ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾತನಾಡಿ, ‘ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ವೇದಿಕೆ, ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಸೂಕ್ತ ಪೊಲೀಸ್ ರಕ್ಷಣಾ ವ್ಯವಸ್ಥೆ ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನಾ ಸಮಾರಂಭಕ್ಕೆ ಅಗತ್ಯವಿರುವ ಸಕಲ ಸಿದ್ಧತೆಗಳನ್ನು ಕೈಗೊಂಡು ಯಶಸ್ವಿ ಕಾರ್ಯಕ್ರಮಕ್ಕೆ ಎಲ್ಲರೂ ಶ್ರಮಿಸಬೇಕು. ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಹಾಗೂ 19 ಕೆರೆ ತುಂಬುವ ಯೋಜನೆಯ ಕುರಿತಾದ ಕಿರು ಸಾಕ್ಷ್ಯಚಿತ್ರ ಕಾರ್ಯಕ್ರಮದಲ್ಲಿ ಪ್ರದರ್ಶನ ಹಾಗೂ ಲಿಂಬೆ ಅಭಿವೃದ್ದಿ ಮಂಡಳಿ ಲೋಗೊ ಸಿದ್ಧಪಡಿಸಿ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಇಂಡಿ ಉಪವಿಭಾಗಾಧಿಕಾರಿ ಅನುರಾಧಾ ವಸ್ತ್ರದ, ಇಂಡಿ ತಹಶೀಲ್ದಾರ್ ವಿ.ಎಸ್.ಕಡಕಭಾವಿ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಇಂಡಿಯಲ್ಲಿ ನಡೆಯಲಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಚಾಲನೆ ಶಂಕು ಸ್ಥಾಪನೆ ಕಾರ್ಯಕ್ರಮದ ಯಶಸ್ವಿಗೆ ಪೂರ್ವ ಸಿದ್ಧತೆ ಕೈಗೊಳ್ಳಬೇಕು
ಯಶವಂತರಾಯಗೌಡ ಪಾಟೀಲಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.