ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರದಲ್ಲಿ ಕೊಳವೆಬಾವಿಗೆ ಬಿದ್ದ ಮಗು: ಅಹೋ ರಾತ್ರಿ ನಡೆದ ಕಾರ್ಯಾಚರಣೆ

Published 4 ಏಪ್ರಿಲ್ 2024, 2:11 IST
Last Updated 4 ಏಪ್ರಿಲ್ 2024, 2:11 IST
ಅಕ್ಷರ ಗಾತ್ರ

ವಿಜಯಪುರ: ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ತೋಟದ ವಸ್ತಿಯಲ್ಲಿ ಕೊಳವೆಬಾವಿಯೊಳಗೆ ಸಿಲುಕಿಕೊಂಡಿರುವ ಮಗುವಿನ ರಕ್ಣಣೆಗಾಗಿ ಅಹೋರಾತ್ರಿ ಕಾರ್ಯಾಚರಣೆ ನಡೆದಿದೆ.

ಬೆಳಗಾವಿ, ಕಲಬುರ್ಗಿಯಿಂದ ಎನ್‌ಡಿಆರ್‌ಎಫ್‌, ಹೈದರಾಬಾದ್‌ನಿಂದ ಎನ್‌ಡಿಆರ್‌ಎಫ್‌ ತಂಡ ರಾತ್ರಿಯೇ ಸ್ಥಳಕ್ಕೆ ಬಂದಿದ್ದು, ಸ್ಥಳೀಯ ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿ ಜೊತೆಗೂಡಿ ರಕ್ಷಣಾ ಕಾರ್ಯಾಚರಣೆಗೆ ವೇಗ ನೀಡಿದ್ದಾರೆ.

ಕೊಳವೆಬಾವಿ ಪಕ್ಕದಲ್ಲಿ ಸಮಾನಾಂತರವಾಗಿ ಗುಂಡಿಯನ್ನು ತೋಡಿ ಮಣ್ಣನ್ನು ಹೊರತೆಗೆದು ಮಗುವಿರುವ ಸ್ಥಳದ ಬಳಿಗೆ ರಕ್ಷಣಾ ತಂಡ ಸಮೀಪಿಸುತ್ತಿದೆ.

ಕಾರ್ಯಾಚರಣೆ ವೇಳೆ ಕಲ್ಲು, ಗಟ್ಟಿಯಾದ ಗರಸು ಎದುರಾಗಿರುವ ಕಾರಣ ರಕ್ಷಣೆಗೆ ತೊಡಕಾಗಿದೆ. ಜಿಲ್ಲಾಧಿಕಾರಿ ಟಿ.ಭೂಬಾಲನ್, ಎಸ್ ಪಿ ಋಷಿಕೇಶ ಸೋನಾವಣೆ, ಉಪ ವಿಭಾಗಾಧಿಕಾರಿ ಅಬೀದ್ ಗದ್ಯಾಳ ಅವರು ಕಾರ್ಯಾಚರಣೆ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ

ಸಾತ್ವಿಕ್ ಮುಜಗೊಂಡ

ಸಾತ್ವಿಕ್ ಮುಜಗೊಂಡ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT