ವಿಜಯಪುರ: ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ನಿರ್ದೇಶನದ ಮೇರೆಗೆ ನಗರದ ಮಯೂರ ಆದಿಲ್‌ಶಾಹಿ ಹಾಗೂ ಮಯೂರ ಆದಿಲ್‌ಶಾಹಿ ಅನೆಕ್ಸ್ ಹೋಟೆಲ್, ರೆಸ್ಟೋರೆಂಟ್‌ನಲ್ಲಿ ಸ್ವಚ್ಛ ಭಾರತ ಅಭಿಯಾನ ಆಚರಿಸಲಾಗುತ್ತಿದೆ ಎಂದು ವ್ಯವಸ್ಥಾಪಕ ಸುನೀಲ್ ಕುಮಾರ್ ಎಸ್. ತಿಳಿಸಿದರು.

ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಕಳೆದ ಮೂರು ತಿಂಗಳಿನಿಂದ ಪ್ರತಿ ಮಂಗಳವಾರ ಹೋಟೆಲ್ ಮತ್ತು ರೆಸ್ಟೋರೆಂಟ್ ಆವರಣದಲ್ಲಿ ಸಿಬ್ಬಂದಿ ಒಂದು ತಾಸು ಸ್ವಚ್ಛತಾ ಕೆಲಸವನ್ನು ಮಾಡುತ್ತಿರುವುದಾಗಿ ಹೇಳಿದರು.

ಕೋವಿಡ್ ಸಾಂಕ್ರಾಮಿಕ ರೋಗ ಇರುವುದರಿಂದಹೋಟೆಲ್, ರೆಸ್ಟೋರೆಂಟ್‌ನಲ್ಲಿ ತಂಗುವ ಪ್ರವಾಸಿಗರಿಗೆ ಯಾವುದೇ ತೊಂದರೆಯಾಗಬಾರದು ಹಾಗೂ ಪ್ರವಾಸಿಗರಿಗೆ ಸ್ವಚ್ಛ ಮತ್ತು ಸುಂದರ ವಾತಾವರಣ ಕಲ್ಪಿಸುವ ಉದ್ದೇಶದಿಂದ ಸ್ವಚ್ಛತಾ ಕಾರ್ಯಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಅಲ್ಲದೇ, ಪ್ರತಿದಿನ ಬೆಳಿಗ್ಗೆ 6.30ರಿಂದ 8.30ರ ವರೆಗೆ ಹಾಗೂ ಸಂಜೆ 4.30ರಿಂದ 5.30ರ ವರೆಗೆ ಮಯೂರದಲ್ಲಿ ತಂಗುವ ಪ್ರವಾಸಿಗರಿಗಾಗಿ ‘ಹೆರಿಟೇಜ್ ವಾಕ್’ ಆಯೋಜಿಸಲಾಗುತ್ತಿದೆ. ಸಮೀಪದ ಸ್ಮಾರಕದ ವರೆಗೂ ಕಾಲ್ನಡಿಗೆಯಲ್ಲಿ ಕ್ರಮಿಸಿ, ಅವುಗಳ ಮಹತ್ವದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಇದಕ್ಕೆ ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.