₹10 ಕೋಟಿ ವಿಶೇಷ ಅನುದಾನಕ್ಕೆ ಬೇಡಿಕೆ
ಪುರಸಭೆ ಸದಸ್ಯರ ನಿಯೋಗ ಪೌರಾಡಳಿತ ಸಚಿವರಿಗೆ ಭೇಟಿಯಾಗಿ ಪಟ್ಟಣದ ಅಭಿವೃದ್ಧಿಗೆ ₹ 10 ಕೋಟಿ ವಿಶೇಷ ಅನುದಾನ ಬಿಡುಗಡೆಗೊಳಿಸುವಂತೆ ಮನವಿ ಮಾಡಿಕೊಳ್ಳಲಾಗಿತ್ತು. ಅದರಲ್ಲಿ ₹ 5 ಕೋಟಿ ಅನುದಾನ ಶೀಘ್ರದಲ್ಲಿ ಪುರಸಭೆಗೆ ಜಮೆಯಾಗಲಿದೆ. ಅದರಲ್ಲಿ ₹ 1.50 ಕೋಟಿ ವೆಚ್ಚದಲ್ಲಿ ಟಿಪ್ಪುಸುಲ್ತಾನ್ ವೃತ್ತದಿಂದ ತೋಂಟದ ಸಿದ್ಧಲಿಂಗ ಶ್ರೀಗಳ ಮುಖ್ಯರಸ್ತೆ ಮಾರ್ಗವಾಗಿ ಸ್ವಾಮಿವಿವೇಕಾನಂದ ವೃತ್ತದವರೆಗೆ ಟಿ.ಸಿ ರಸ್ತೆ ಚರಂಡಿ ಹಾಗೂ ಪುರಸಭೆ ಕಾರ್ಯಾಲಯದ ಬಳಿ ಸೇತುವೆ ನಿರ್ಮಾಣ ಕಾಮಗಾರಿ ನಡೆಯಲಿದೆ. ಹಣಮಂತ ಸುಣಗಾರ ಪುರಸಭೆ ಸದಸ್ಯ.