ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಸಿಎಂ ವೈಮಾನಿಕ ಸಮೀಕ್ಷೆ ಮೊಟಕು, ಪ್ರವಾಹ ಸಂತ್ರಸ್ತರ ಬೇಸರ

Last Updated 21 ಅಕ್ಟೋಬರ್ 2020, 12:09 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯಲ್ಲಿ ಭೀಮಾ ನದಿ ಪ್ರವಾಹದಿಂದ ಬಾಧಿತವಾದ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮೊಟಕುಗೊಳಿಸಿದರು.

ಆಲಮಟ್ಟಿಯಲ್ಲಿ ಅಧಿಕಾರಿಗಳೊಂದಿಗೆ ನಡೆಯಬೇಕಾಗಿದ್ದ ಪ್ರವಾಹ ಪರಿಶೀಲನೆ ಸಭೆಯೂ ಸಿಎಂ ಬಾರದ ಕಾರಣ ರದ್ದುಗೊಂಡಿತು. ಸಿಎಂ ಬಾರದೇ ಇರುವುದಕ್ಕೆ ಜಿಲ್ಲೆಯ ಪ್ರವಾಹ ಸಂತ್ರಸ್ತರು ಬೇಸರ ವ್ಯಕ್ತಪಡಿಸಿದರು.

ಸಿಎಂ ಆಗಮನದ ಹಿನ್ನೆಲೆಯಲ್ಲಿ ಅಧಿಕಾರಿಗಳು ಎರಡು ದಿನಗಳಿಂದ ಸಿದ್ದತೆ ಮಾಡಿಕೊಂಡಿದ್ದರು. ನೂರಾರು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಅಧಿಕಾರಿಗಳು ಆಲಮಟ್ಟಿಯಲ್ಲಿ ಠಿಕಾಣಿ ಹೂಡಿದ್ದರು. ಸಿಎಂಗೆ ಮನವಿ ಕೊಡಲು ಶಾಸಕರು, ಮುಖಂಡರು ಕಾದುಕುಳಿತಿದ್ದರು. ಸಭೆ ರದ್ದಾದ ಕಾರಣ ನಿರಾಸೆಯಿಂದ ತೆರಳಿದರು.

ಈ ಕುರಿತು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಹವಾಮಾನ ವೈಪರೀತ್ಯದಿಂದ ಸಿಎಂ ವೈಮಾನಿಕ ಸಮೀಕ್ಷೆ ಸಾಧ್ಯವಾಗಿಲ್ಲ. ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಕುರಿತು ಸಿಎಂ ಗಮನಕ್ಕೆ ತರುತ್ತೇನೆ ಎಂದರು.

ಜಿಲ್ಲೆಯಲ್ಲಿ ಪ್ರವಾಹಕ್ಕೆ ಸಂಬಂಧಿಸಿದಂತೆ ₹636 ಕೋಟಿ ಪರಿಹಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು. ಭೀಮಾ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಮುಖ್ಯಮಂತ್ರಿ ಮೂಲಕ ಕೇಂದ್ರಕ್ಕೆ ಮನವಿ ಮಾಡಲಾಗುವುದು ಎಂದರು.

ಶಾಸಕ ಸೋಮನಗೌಡ ಪಾಟೀಲ ಸಾಸನೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT