ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಆಲಮಟ್ಟಿ ಜಲಾಶಯಕ್ಕೆ ಸಿಎಂ ಭೇಟಿ; ಬಿಗಿ ಭದ್ರತೆ

Last Updated 25 ಆಗಸ್ಟ್ 2020, 6:58 IST
ಅಕ್ಷರ ಗಾತ್ರ
ADVERTISEMENT
""

ವಿಜಯಪುರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಮಧ್ಯಾಹ್ನ ಆಲಮಟ್ಟಿ ಜಲಾಶಯಕ್ಕೆ ಭೇಟಿ ನೀಡುವ ಹಿನ್ನಲೆಯಲ್ಲಿ ಆಲಮಟ್ಟಿ ಜಲಾಶಯದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಪತ್ರಕರ್ತರಿಗೂ ನಿರ್ಬಂಧ ವಿಧಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ಮಾಡಿ ಒಳ ಬಿಡಲಾಗುತ್ತಿದೆ.

ಸಿಎಂ ಸ್ವಾಗತ ಕೋರಿ ಆಲಮಟ್ಟಿ ಜಲಾಶಯ, ಪ್ರವೇಶ ದ್ವಾರ, ವೃತ್ತ ಸೇರಿದಂತೆ ಪಟ್ಟಣದಲ್ಲಿ ಹೂವಿನ ಅಲಂಕಾರ ಮಾಡಲಾಗಿದೆ. ಫ್ಲೆಕ್ಸ್, ಬ್ಯಾನರ್, ಕಟೌಟ್ ಗಳು ರಾರಾಜಿಸುತ್ತಿವೆ.

ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಯಲ್ಲಿ ಪ್ರವಾಹಕ್ಕೆ ಸಿಲುಕಿರುವ ಪ್ರದೇಶಗಳನ್ನು ಮುಖ್ಯ ಮಂತ್ರಿ ವೈಮಾನಿಕ ಸಮೀಕ್ಷೆ ಮಾಡಿದ ಬಳಿಕ ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ನಂತರ ಅಧಿಕಾರಿಗಳು, ಸಚಿವರು, ಶಾಸಕರೊಂದಿಗೆ ಸಭೆ ನಡೆಸಲಿದ್ದಾರೆ.

ಬೆಳಗಾವಿ ಐಜಿಪಿ, ಬಾಗಲಕೋಟೆ ಜಿಲ್ಲಾ ಎಸ್ಪಿಖುದ್ದು ಭದ್ರತೆಯ ಉಸ್ತುವಾರಿ ವಹಿಸಿದ್ದಾರೆ‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT