ವಿಜಯಪುರ: ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜುಲೈ 14ರ ಬೆಳಿಗ್ಗೆ 11ಕ್ಕೆ ಇಂಡಿ ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಇಂಡಿ ವಿಧಾನಸಭಾ ಕ್ಷೇತ್ರದಲ್ಲಿ ₹ 4,555 ಕೋಟಿ ಅನುದಾನದಲ್ಲಿ ಕೈಗೊಂಡಿರುವ ವಿವಿಧ ಇಲಾಖೆಯ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ನೆರವೇರಿಸುವ ಮೂಲಕ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಮುನ್ನುಡಿ ಬರೆಯಲಿದ್ದಾರೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು. ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಹೊರ್ತಿಯ ರೇವಣಸಿದ್ದೇಶ್ವರ ಏತ ನಿರಾವರಿ ಯೋಜನೆ ಕಾಮಗಾರಿ, ತಿಡಗುಂದಿ ಶಾಖಾ ಕಾಲುವೆಯ ವಿಸ್ತರಣೆ ಕಿ.ಮೀ. 56 ರಿಂದ 65.58 ವರೆಗಿನ ವಿತರಣಾ ಜಾಲ ನಿರ್ಮಾಣದ ಕಾಮಗಾರಿ, ಚಡಚಣ-ಗಾಣಗಾಪೂರ (115 ಕಿ.ಮೀ.) ರಸ್ತೆ ಅಭಿವೃದ್ಧಿ (ಇಂಡಿ ಮತಕ್ಷೇತ್ರದ 48 ಕಿ.ಮೀ.), (ಪಡನೂರ-ಅಂಕಲಗಿ) ಭೀಮಾ ನದಿಗೆ ಸೇತುವೆ ಕಾಮಗಾರಿ, ಇಂಡಿ ರೈಲು ನಿಲ್ಯಾಣದಿಂದ ಹಲಸಂಗಿ ರಾಷ್ಟ್ರೀಯ ಹೆದ್ದಾರಿವರೆಗೆ ರಸ್ತೆ ಸುಧಾರಣೆ ಕಾಮಗಾರಿ (ಎನ್ ಎಚ್-52), ಔರಾದ ಸದಾಶಿವಗಡ ರಾಜ್ಯ ಹೆದ್ದಾರಿ 34ರ ರಸ್ತೆ ಸುಧಾರಣೆ ಕಾಮಗಾರಿ, ಇಂಡಿ ಪಟ್ಟಣದಲ್ಲಿ ಜಿ.ಟಿ.ಟಿ.ಸಿ. ಕಾಲೇಜು ನಿರ್ಮಾಣ ಕಾಮಗಾರಿ, ಪ್ರಗತಿ ಪಥ ಯೋಜನೆಯಡಿ ರಸ್ತೆ ಕಾಮಗಾರಿ ಸೇರಿದಂತೆ ವಿವಿಧ ಇಲಾಖೆಯ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದರು.

ಇಂಡಿ ಮತ್ತು ಚಡಚಣ ತಾಲ್ಲೂಕಿನ 19 ಕೆರೆ ತುಂಬುವ ಯೋಜನೆ, ಜಲಜೀವನ ಮಿಷನ್ ಕಾಮಗಾರಿಗಳು, ಇಂಡಿ ನಗರದಲ್ಲಿ ನೂತನ ಶ್ರೀ ಸಿದ್ದೇಶ್ವರ ವಾಣಿಜ್ಯ ಸಂಕೀರ್ಣ ಮಾರುಕಟ್ಟೆ, ಇಂಡಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ, ಇಂಡಿ ನಗರದ ಪ್ರಗತಿ ಕಾಲೊನಿ ಸಿ.ಸಿ.ರಸ್ತೆ, ಹೊರ್ತಿ ಗ್ರಾಮದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿಗಳಿಗೆ ಹೆಚ್ಚುವರಿ ಕೊಠಡಿಗಳು ಹಾಗೂ ಮೂಲ ಸೌಕರ್ಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಇಂಡಿ, ಮಿರಗಿ ಗ್ರಾಮದ ಹಳ್ಳಕ್ಕೆ ಬ್ರಿಡ್ಜ್ ಕಂ ಬ್ಯಾರೇಜ್, ಇಂಡಿ ನಗರದ ಹೀರೇಇಂಡಿ ಹನುಮಾನ್ ಗುಡಿಯಿಂದ ಜಲದಪ್ಪನ ಕೆರೆವರೆಗೆ ಹಳ್ಳದ ಅಭಿವೃದ್ಧಿ, ಆಳೂರ ಗ್ರಾಮದಲ್ಲಿ ಬಾಂದಾರ, ನಿಂಬಾಳ ಗ್ರಾಮದ ಸಣ್ಣ ನೀರಾವರಿ ಕೆರೆ ಅಭಿವೃದ್ಧಿ, ಹಿರೇಬೇವನೂರ ಗ್ರಾಮದ ಇಂಗು ಕೆರೆ ಅಭಿವೃದ್ಧಿ, ಹಡಲಸಂಗ ಗ್ರಾಮದ ಸಣ್ಣ ನೀರಾವರಿ ಕೆರೆ ಅಭಿವೃದ್ಧಿ, ಝಳಕಿ ಹಾಗೂ ಇಂಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸಾತಲಗಾಂವ ಪಿ.ಐ ಸರ್ಕಾರಿ ಪ್ರೌಢ ಶಾಲೆ ಕಟ್ಟಡ, ಇಂಡಿ ತಾಲ್ಲೂಕಿನ 4 ಅಂಗನವಾಡಿ ಕಟ್ಟಡಗಳು, ಇಂಡಿ ತಾಲ್ಲೂಕಿನ ಅಗರಖೇಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ವೈದ್ಯಾಧಿಕಾರಿಗಳ ಮತ್ತು ಸಿಬ್ಬಂದಿಗಳ ವಸತಿ ಗೃಹ ಹಾಗೂ ಝಳಕಿ ಡಿಪ್ಲೊಮಾ ಕಾಲೇಜಿನ ಹೆಚ್ಚುವರಿ ಕೊಠಡಿಗಳ ಕಾಮಗಾರಿಗಳನ್ನು ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾತನಾಡಿ, ಇಂಡಿ ಪಟ್ಟಣದಲ್ಲಿ ಆಯೋಜಿಸಲಾದ ವಿವಿಧ ಅಭಿವೃದ್ದಿ ಕಾಮಗಾರಿಗಳ ಶಂಕು ಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮ ಯಶಸ್ವಿ ಆಯೋಜನೆಗೆ ಪೂರ್ವ ಸಿದ್ಧತೆ ಕೈಗೊಳ್ಳಬೇಕು. ಯಾವುದೇ ಲೋಪಗಳಿಗೆ ಆಸ್ಪದ ನೀಡದೇ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಹೇಳಿದರು.

ವೇದಿಕೆ ಸಿದ್ಧತೆ, ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ, ಸಾರಿಗೆ ವ್ಯವಸ್ಥೆ, ಇಂಡಿ ಪಟ್ಟಣ ಸ್ವಚ್ಛತೆ, ವೇದಿಕೆ ನಿರ್ವಹಣೆ, ವೇದಿಕೆ ಅಲಂಕಾರ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಂಡು ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಶ್ರಮಿಸಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ್, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ್ ಮಾರಿಹಾಳ, ಇಂಡಿ ಉಪವಿಭಾಗಾಧಿಕಾರಿ ಅನುರಾಧಾ ವಸ್ತ್ರದ, ಆಲಮಟ್ಟಿಯ ಕೆಬಿಜೆಎನ್ಎಲ್ ಮುಖ್ಯ ಎಂಜಿನಿಯರ್ ಬಸವರಾಜ, ರಾಂಪೂರ ಕೆಬಿಜೆಎನ್ಎಲ್ ಮುಖ್ಯ ಎಂಜಿನಿಯರ್ ರವಿಶಂಕರ್, ಇಂಡಿ ಡಿವೈಎಸ್ಪಿ ಜಗದೀಶ್, ಇಂಡಿ ತಹಶೀಲ್ದಾರ್ ಬಿ.ಎಸ್.ಕಡಕಭಾವಿ ಸಭೆಯಲ್ಲಿ ಉಪಸ್ಥಿತರಿದ್ದರು.

ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯಕ್ರಮ ನಿರ್ವಹಿಸಬೇಕು ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿ ಯಶಸ್ವಿಗೊಳಿಸಬೇಕು
ಯಶವಂತರಾಯಗೌಡ ಪಾಟೀಲಶಾಸಕ ಇಂಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.