ಮಂಗಳವಾರ, ಮಾರ್ಚ್ 21, 2023
30 °C

ಕ್ರೀಡಾಂಗಣ ಬಾಕಿ ಕಾಮಗಾರಿ ಪೂರ್ಣಗೊಳಿಸಿ: ಡಿ.ಸಿ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ನಗರದ ಜಿಲ್ಲಾ ಕ್ರೀಡಾಂಗಣದ ಬಾಕಿ ಇರುವ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಪಿ. ಸುನಿಲ್‌ಕುಮಾರ್‌ ಸೂಚಿಸಿದರು.

ನಗರದ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಕ್ರೀಡಾಂಗಣದ ಸಿಂಥೆಟಿಕ್ ಟ್ರ್ಯಾಕ್‍ನ ಮಧ್ಯದಲ್ಲಿ ಹುಲ್ಲು ಹಾಸಿಗೆ, ಸ್ಪಿಂಕ್ಲರ್ಸ್‌ ಅಳವಡಿಕೆ, ಟ್ರ್ಯಾಕ್ ಫೀಲ್ಡ್ ಇವೆಂಟ್ ಸಲಕರಣೆಗಳನ್ನು ಅಳವಡಿಸುವುದು ಮತ್ತು ಕ್ರೀಡಾಂಗಣದಿಂದ ಶಹಾಪೇಟೆ ಸಂಪರ್ಕಿಸುವ ಚರಂಡಿ ಕೆಲಸ ನಿರ್ವಹಿಸಲು ₹1.31ಕೋಟಿ ಅನುದಾನದ ಅವಕಾಶ ಮಾಡಿಕೊಂಡು ಕಾಮಗಾರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.

ಕನಕದಾಸ ಬಡಾವಣೆಯಲ್ಲಿ ನಿರ್ಮಿಸುತ್ತಿರುವ ಈಜುಕೊಳ ಕಾಮಗಾರಿಯನ್ನು ₹ 2.20 ಕೋಟಿ ವೆಚ್ಚದಲ್ಲಿ  ವ್ಯವಸ್ಥಿತ ರೀತಿಯಲ್ಲಿ ಕೈಗೊಳ್ಳಬೇಕು. ಕಾಮಗಾರಿ ಪೂರ್ಣಗೊಂಡ ನಂತರ ಅದರ ಬಳಕೆಯ ಕ್ರೀಯಾ ಯೋಜನೆಯನ್ನು ವ್ಯವಸ್ಥಿತ ರೀತಿಯಲ್ಲಿ ಕೈಗೊಳ್ಳಬೇಕು ಎಂದರು.

ಕನಕದಾಸ ಬಡಾವಣೆಯಲ್ಲಿನ ಒಳಾಂಗಣ ಕ್ರೀಡಾಂಗಣದ ಕಾಮಗಾರಿಯಲ್ಲಿ ಯಾವುದೇ ರೀತಿಯಲ್ಲಿ ಲೋಪಗಳಾದಂತೆ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು.

ಜಿಲ್ಲಾ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ವಾಲಿಬಾಲ್ ಅಂಕಣ ಕಾಮಗಾರಿಯು ಪೂರ್ಣಗೊಂಡಿದ್ದು, ಅನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡಬೇಕು ಎಂದರು.

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷ ಶೆಟ್ಟಿ, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಲೋಣಿ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು