ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಮುಸ್ಲಿಂ, ಕ್ರೈಸ್ತರ ಮೇಲಿನ ದಾಳಿಗೆ ಖಂಡನೆ

ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದಿಂದ ಪ್ರತಿಭಟನೆ
Last Updated 3 ಜನವರಿ 2022, 11:23 IST
ಅಕ್ಷರ ಗಾತ್ರ

ವಿಜಯಪುರ: ದೇಶ ಮತ್ತು ರಾಜ್ಯದಲ್ಲಿ ಮುಸ್ಲಿಂ, ಕ್ರೈಸ್ತರ ಮೇಲೆ ದಾಳಿ ಖಂಡಿಸಿಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ವತಿಯಿಂದ ಪ್ರತಿಭಟನೆ ಮಾಡಲಾಯಿತು.

ನಗರದ ಅಂಬೇಡ್ಕರ್‌ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ ಅವರಿಗೆ ಮನವಿ ಸಲ್ಲಿಸಿದರು.

ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ಉಪಾಧ್ಯಕ್ಷ ಮೊಹಮ್ಮದ್‌ ರಫೀಕ ಟಪಾಲ್‌ ಮಾತನಾಡಿ, ದೇಶದಲ್ಲಿ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರದಿಂದ ಸತತವಾಗಿ ಅಲ್ಪಸಂಖ್ಯಾತರ ಸಮುದಾಯದ ಮೇಲೆ ದೌರ್ಜನ್ಯವೆಸಗಲಾಗುತ್ತಿದೆ ಎಂದು ಆರೋಪಿಸಿದರು.

ಹರಿದ್ವಾರದಲ್ಲಿ ನಡೆದ ಸಭೆಯೊಂದರಲ್ಲಿ ಅಲ್ಪಸಂಖ್ಯಾತರ ರಕ್ತವನ್ನು ಹರಿಸುತ್ತೇವೆ ಎಂದು ಹೇಳುವ ಮೂಲಕಕೋಮು ಸೌಹಾರ್ದಕ್ಕೆ ಧಕ್ಕೆ ತಂದಿರುವ ವಿಎಚ್‍ಪಿ ಮತ್ತು ಇತರ ಹಿಂದೂ ಸಂಘಟನೆಗಳಿಗೆ ಬಿಜೆಪಿ ಸರ್ಕಾರದ ಬೆಂಬಲ ಇದೆ ಎಂದು ದೂರಿದರು.

ರಾಜ್ಯದ ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಹ ಕ್ರಿಸ್‍ಮಸ್ ಹಬ್ಬದ ವೇಳೆ ಬಜರಂಗ ದಳದ ಕಾರ್ಯಕರ್ತರು ಕ್ರೈಸ್ತರ ಮೇಲೆ ಹಲ್ಲೆ ಮಾಡಿದ್ದಾರೆ. ಈ ಎಲ್ಲ ಘಟನೆಗಳಿಗೆ ಬಿಜೆಪಿ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿದರು.

ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಪೊಲೀಸರು ಏನು ಮಾಡುತ್ತಿದ್ದಾರೆ? ಇಂತಹ ಗೂಂಡಾಗಳನ್ನು ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸುತ್ತಿಲ್ಲ? ಇಂತಹ ಸಂಘಟನೆಗಳನ್ನು ಏಕೆ ನಿಷೇಧಿಸುತ್ತಿಲ್ಲ ಎಂದು ಪ್ರಶ್ನಿಸಿದರು.

ಬಿಜೆಪಿ ಸರ್ಕಾರದ ಇಂತಹ ಕೃತಿಗಳನ್ನು ಚುನಾವಣೆಗಳು ಸಮೀಪಿಸುತ್ತಿರುವ ಸಂದರ್ಭದಲ್ಲಿ ಮಾತ್ರ ಮಾಡುತ್ತಿವೆ ಎಂದು ಆರೋಪಿಸಿದರು.

ದೇಶದಲ್ಲಿ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಸಂವಿಧಾನವನ್ನು ಬಿಜೆಪಿ ಸರ್ಕಾರವು ಪುಸ್ತಕದಲ್ಲಿ ಓದಲು ಮಾತ್ರ ಸೀಮಿತವನ್ನಾಗಿಸಿದೆ. ಆದರೆ, ಇದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುತ್ತಿಲ್ಲ ಎಂದು ಹರಿಹಾಯ್ದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜು ಆಲಗೂರ ಮಾತನಾಡಿ, ಭಾರತ ಭಾವೈಕ್ಯ ಹೊಂದಿರುವ ದೇಶವಾಗಿದ್ದು, ಶಾಂತಿಯನ್ನು ಕದಡುತ್ತಿರುವ ಬಿಜೆಪಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಇಂತಹ ಕೃತಿಗಳನ್ನು ಕೊನೆಗಾಣಿಸದಿದ್ದರೆ ಅಲ್ಪಸಂಖ್ಯಾತರು, ದಲಿತರು, ಕ್ರೈಸ್ತರು ಹಾಗೂ ಇನ್ನಿತರ ಸಮುದಾಯಗಳು ಬೀದಿಗಿಳಿದು ಹೋರಾಟ ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ, ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಬಡೇಪೀರ ಜುನೇದಿ, ಕಾಂಗ್ರೆಸ್ ಮುಖಂಡರಾದ ಅಬ್ದುಲ್‍ಹಮೀದ ಮುಶ್ರೀಫ್, ಎಸ್.ಎಂ. ಪಾಟೀಲ ಗಣಿಹಾರ ಮಾತನಾಡಿದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಾಂದಸಾಬ ಗಡಗಲಾವ, ಸುರೇಶಗೌಡ ಪಾಟೀಲ ಧೂಳಖೇಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಮೀರಅಹ್ಮದ ಬಕ್ಷಿ, ಶಹಾಜಾ ಮುಲ್ಲಾ, ರಾಜ್ಯ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಉಸ್ಮಾನ ಪಟೇಲ, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳಾದ ವಸಂತ ಹೊನಮೊಡೆ, ಅಬ್ದುಲ್‍ಖಾದಿರ್‌ ಖಾದಿಮ್, ಶಬ್ಬೀರ ಜಾಗೀರದಾರ, ಜಯಶ್ರೀ ಭಾರತೆ, ರಾಜೇಶ್ವರಿ ಚೋಳಕೆ, ಮಂಜುಳಾ ಗಾಯಕವಾಡ, ಲಕ್ಷ್ಮಿ ಕ್ಷೀರಸಾಗರಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

***

ಕೋಮು ಸಂಘರ್ಷದ ಚಟುವಟಿಕೆಗಳನ್ನು ನಿಲ್ಲಿಸದಿದ್ದರೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಉಗ್ರವಾಗಿ ಹೋರಾಟ ಮಾಡಬೇಕಾಗುತ್ತದೆ.
ಮೊಹಮ್ಮದ್‌ ರಫೀಕ ಟಪಾಲ್‌,ಉಪಾಧ್ಯಕ್ಷ, ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT