ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರಗ ಜ್ಞಾನೇಂದ್ರ ಹೇಳಿಕೆಗೆ ಖಂಡನೆ

Published 4 ಆಗಸ್ಟ್ 2023, 13:56 IST
Last Updated 4 ಆಗಸ್ಟ್ 2023, 13:56 IST
ಅಕ್ಷರ ಗಾತ್ರ

ವಿಜಯಪುರ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮೈ ಬಣ್ಣದ ಬಗ್ಗೆ ಹಾಗೂ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಅವರ ಬಗ್ಗೆ ಹಗುರವಾಗಿ ಮಾತನಾಡಿದ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾಂತಾ ನಾಯಕ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷ ಹಾಗೂ ಹಿರಿಯ ರಾಜಕಾರಣಿ ಬಗ್ಗೆ ಮಾತನಾಡಲು ಬಿಜೆಪಿಗೆ ಯೋಗ್ಯತೆ ಇಲ್ಲ. ಆರಗ ಜ್ಞಾನೇಂದ್ರ ಅವರು ಖರ್ಗೆ ಅವರ ಕುರಿತು ಇಂತಹ ಅವಹೇಳನಕಾರಿ ಹೇಳಿಕೆ ನೀಡಿರುವುದು ನಾಚಿಕೆಗೇಡು. ಬಿಜೆಪಿ ಇಂತಹ ಮಾತುಗಳನ್ನು ಆಡುವ ಮೂಲಕ ಕೀಳುಮಟ್ಟದ ರಾಜಕೀಯ ಮಾಡುತ್ತಿದೆ. ಇಂತಹ ಕೆಟ್ಟ ಚಟ ಬಿಜೆಪಿ ಬಿಡದಿದ್ದ‌ರೆ ಕಾಂಗ್ರೆಸ್ ಪಕ್ಷದಿಂದ ಬಿಜೆಪಿ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT