ಶುಕ್ರವಾರ, ಅಕ್ಟೋಬರ್ 30, 2020
25 °C

ವಿಜಯಪುರ: ರಾಹುಲ್ ಗಾಂಧಿ ಮೇಲೆ ದೌರ್ಜನ್ಯಕ್ಕೆ ಖಂಡನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಉತ್ತರಪ್ರದೇಶದ ಹತ್ರಾಸ್‌ನಲ್ಲಿ ನಡೆದಿರುವ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೀಡಾದ ಯುವತಿಯ ಕುಟುಂಬದವರಿಗೆ ಸಾಂತ್ವನ ಹೇಳಲು ತೆರಳುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕಾರನ್ನು ತಡೆದು ಪೊಲೀಸರು ನಡೆಸಿರುವ ದೌರ್ಜನ್ಯ ಖಂಡನೀಯ ಎಂದು ಬಿಎಸ್‌ಪಿ ಮುಖಂಡ  ಶ್ರೀನಾಥ್ ಪೂಜಾರಿ ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಪ್ರಜಾಪ್ರಭುತ್ವ ಇದೆಯೋ ಅಥವಾ ಸರ್ವಾಧಿಕಾರಿ ಆಡಳಿತದ ರಾಜ್ಯವಾಗಿದೆಯೋ ಎಂಬ ಪ್ರಶ್ನೆ ಉದ್ಭವಿಸುತ್ತಿದು, ರಾಹುಲ್ ಗಾಂಧಿ ಅಂತಹ ಒಂದು ಪಕ್ಷದ ರಾಷ್ಟ್ರ ಮಟ್ಟದ ನಾಯಕರ ಮೇಲೆ ಈ ರೀತಿ ದೌರ್ಜನ್ಯ ನಡೆಯುತ್ತದೆ ಎಂದ ಮೇಲೆ ಆ ರಾಜ್ಯದಲ್ಲಿ ಮಹಿಳೆಯರ ಗತಿಯನೂ ಎಂದು ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲವಾಗಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ರಾಜೀನಾಮೆ ಪಡೆಯಬೇಕು ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು