ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿಜಯಪುರ | ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್‌ ಬೃಹತ್ ಪ್ರತಿಭಟನೆ

Published : 19 ಆಗಸ್ಟ್ 2024, 10:26 IST
Last Updated : 19 ಆಗಸ್ಟ್ 2024, 10:26 IST
ಫಾಲೋ ಮಾಡಿ
Comments

ವಿಜಯಪುರ: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಸಿದರು.

ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ನಡೆದ ಪ್ರತಿಭಟನಾ ರ್ಯಾಲಿಯಲ್ಲಿ ಸಾವಿರಾರೂ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

ರಾಜ್ಯಪಾಲರ ವಿರುದ್ಧ, ಬಿಜೆಪಿ ವಿರುದ್ಧ ಪ್ರತಿಭಟನಕಾರರು ಘೋಷಣೆ ಕೂಗಿ, ಆಕ್ರೋಶ ಹೊರಹಾಕಿದರು.

ಸಚಿವ ಎಂ.ಬಿ ಪಾಟೀಲ,ಶಾಸಕರಾದ ಯಶವಂತರಾಯ ಪಾಟೀಲ, ಸಿ.ಎಸ್ ನಾಡಗೌಡ, ಅಶೋಕ ಮನಗೂಳಿ, ಮಾಜಿ ಶಾಸಕ ರಾಜು ಆಲಗೂರ, ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಸೇರಿದಂತೆ ಅನೇಕರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT