ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ನಿಂದ ಸಾಮಾಜಿಕ ನ್ಯಾಯ ಸಾಧ್ಯವಿಲ್ಲ: ಬಸವರಾಜ ಹೊನವಾಡ

Published 3 ಮೇ 2024, 13:54 IST
Last Updated 3 ಮೇ 2024, 13:54 IST
ಅಕ್ಷರ ಗಾತ್ರ

ವಿಜಯಪುರ: ವಿಧಾನಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳನ್ನು ನೀಡಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡಿದೆ. ಒಂದು ಕೈಯಲ್ಲಿ ಭಾಗ್ಯಗಳನ್ನು ನೀಡಿ ಇನ್ನೊಂದು ಕಡೆ ಕಿತ್ತುಕೊಳ್ಳುವ ಕೆಲಸ ಮಾಡಿದೆ. ಇದರಿಂದ ಕಾಂಗ್ರೆಸ್ ಪಕ್ಷದ ಮೇಲೆ ಜನ ಬೇಸತ್ತಿದ್ದಾರೆ ಎಂದು ಜೆಡಿಎಸ್‌ ಮುಖಂಡ ಬಸವರಾಜ ಹೊನವಾಡ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ 200 ಯುನಿಟ್‌ ವಿದ್ಯುತ್ ಉಚಿತ ಎಂದು ಅದಕ್ಕೆ ಮಾನದಂಡ ಹಾಕಿದರು, ಬಾಂಡ್‌ಗಳ ದರ ಹೆಚ್ಚಿಸಿದರು, ದಲಿತರ ಎಸ್ಸಿಪಿ, ಟಿಎಸ್ಪಿ ಹಣವನ್ನು ‌ಗ್ಯಾರಂಟಿಗೆ ಬಳಸಿಕೊಂಡರು. ಸುಳ್ಳು ಹಾಗೂ ಅಪಪ್ರಚಾರದಿಂದ ಚುನಾವಣೆ ಮಾಡುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಸಾಮಾಜಿಕ ನ್ಯಾಯ ಕಾಂಗ್ರೆಸ್‌ನಿಂದ ಸಾಧ್ಯವಿಲ್ಲ. ಕೇವಲ ಮತಬ್ಯಾಂಕ್‌ಗಾಗಿ ಹಿಂದುಳಿದ ವರ್ಗವನ್ನು ಬಳಸಿಕೊಳ್ಳುತ್ತಿದ್ದಾರೆ. ಕುರುಬ ಸಮಾಜದ ಒಬ್ಬರಿಗೂ ನಿಗಮ ಮಂಡಳಿಯಲ್ಲಿ ಸ್ಥಾನ ನೀಡಿಲ್ಲ ಎಂದರು. 

ಚುನಾವಣೆ ಬಳಿಕ ಕಾಂಗ್ರೆಸ್ ಒಡೆದ‌ ಮನೆಯಾಗಲಿದೆ. ಎಲ್ಲ‌ ಯೋಜನೆಗಳನ್ನು ಬಂದ್ ಆಗಲಿದೆ. ಸರ್ಕಾರ ಲೋಕಸಭೆ ಚುನಾವಣೆ ನಂತರ ಪತನವಾಗಲಿದೆ. ಕಾಂಗ್ರೆಸ್‌ನ ಸುಳ್ಳುಗಳನ್ನು ಜನರು ನಂಬದೆ ಬಿಜೆಪಿ‌ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರನ್ನು ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದರು.

ಜೆಡಿಎಸ್ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಮಾತನಾಡಿ, ವಿಕಸಿತ ಭಾರತಕ್ಕೆ ಮೋದಿ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಸಂಸದ ರಮೇಶ ಜಿಗಜಿಣಗಿ ಅವರಿಗೆ ಬೆಂಬಲಿಸಬೇಕು. ದ್ರಾಕ್ಷಿ, ದಾಳಿಂಬೆ‌ ತೋಟಗಾರಿಕೆ ಬೆಳೆಗೆ ಬೆಂಬಲ ಬೆಲೆ ಸಿಗುವಂತಾಗಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT