ಮುದ್ದೇಬಿಹಾಳ: ‘ಜನೌಷಧ ಕೇಂದ್ರಗಳು, ಉಚಿತವಾಗಿ ಅಕ್ಕಿ ಕೊಡುವ ಯೋಜನೆ, ಆಯುಷ್ಮಾನ್ ಆರೋಗ್ಯ ಕಾರ್ಡ್ನಂತಹ ನೂರಾರು ಜನಪರ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜಾರಿಗೊಳಿಸಿದೆ’ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ನಡೆದ ಕಾರ್ಯಾಗಾರದಲ್ಲಿ ಮಾತನಾಡಿದರು.

‘₹5 ಲಕ್ಷದವರೆಗೆ ಆರೋಗ್ಯ ವಿಮಾ ಯೋಜನೆಯನ್ನು ಮೋದಿ ಸರ್ಕಾರ ಅನುಷ್ಠಾನಗೊಳಿಸಿದೆ. ಗ್ಯಾರಂಟಿ ಅಗ್ಗದ ಯೋಜನೆಗಳನ್ನು ಕೊಟ್ಟು ಜನರನ್ನು ಕಾಂಗ್ರೆಸ್ ಸರ್ಕಾರ ಮರಳು ಮಾಡಲು ಮುಂದಾಗಿದೆ’ ಎಂದು ಆರೋಪಿಸಿದರು.

ಪಕ್ಷದ ಮುಖಂಡ ಗಂಗಾಧರ ನಾಡಗೌಡ ಮಾತನಾಡಿ, ‘ಬಿಜೆಪಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ನಕಲು ಮಾಡುತ್ತಿದೆ’ ಎಂದರು.

ಮುಖಂಡರಾದ ಪ್ರಭು ಕಡಿ, ಕೆಂಚಪ್ಪ ಬಿರಾದಾರ, ಮಧುಸ್ವಾಮಿ, ಸಂಜೀವ ಬಾಗೇವಾಡಿ, ಗಿರೀಶ ಪಾಟೀಲ, ಸಿದ್ದು ಹಿರೇಮಠ, ಅಶೋಕ ರಾಠೋಡ, ನಾಗೇಶ ಕವಡಿಮಟ್ಟಿ, ಗೌರಮ್ಮ ಹುನಗುಂದ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.