ವಿಜಯಪುರ: ‘ಮಹಾತ್ಮ ಗಾಂಧಿ ಅವರ ಒಂದೂ ಕನಸನ್ನು ಕಾಂಗ್ರೆಸ್ ನನಸು ಮಾಡಿಲ್ಲ. ದೇಶಕ್ಕೆ ಸ್ವಾತಂತ್ರ್ಯಸಿಕ್ಕ ಬಳಿಕ ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸುವಂತೆ ಗಾಂಧೀಜಿ ಹೇಳಿದ್ದರು. ಅವರ ಆಶಯದಂತೆ ಕಾಂಗ್ರೆಸ್ ನಡೆದುಕೊಂಡಿತೇ’ ಎಂದು ಸಂಸದ ರಮೇಶ ಜಿಗಜಿಣಗಿ ಪ್ರಶ್ನಿಸಿದರು.

ನಗರಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಶಿಸ್ತಿನ ರೀತಿಯಲ್ಲಿ ಅಂಗಿ, ಚಡ್ಡಿ ಹಾಕುವ ಹುಡುಗನ ನಾಯಕತ್ವನ್ನು ಯಾರು ಒಪ್ಪಿಕೊಳ್ಳುತ್ತಾರೆ. ಕಾಂಗ್ರೆಸ್ ಸರ್ವನಾಶವಾಗುತ್ತದೆ’ ಎಂದರು.

‘ಗಾಂಧೀಜಿ, ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಅವಮಾನಿಸಿದ. ನರೇಗಾ ಯೋಜನೆಗೆ ರಾಮ್ ಜಿ ಹೆಸರಿಡುವ ಮೂಲಕ ಗಾಂಧಿಗೆ ಗೌರವ ಸಲ್ಲಿಸುವ ಹಾಗೂ ಜನರಿಗೆ ಅನುಕೂಲ ಮಾಡಿಕೊಡುವ ಕೆಲಸವನ್ನು ಪ್ರಧಾನಿ ಮೋದಿ ಮಾಡಿದ್ದಾರೆ. ಇದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಹಿಸಲಾಗುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.