ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಕಾಂಗ್ರೆಸ್‌ ‘ಜನಧ್ವನಿ’ ಧರಣಿ ಸತ್ಯಾಗ್ರಹ ಆ.20ಕ್ಕೆ

Last Updated 16 ಆಗಸ್ಟ್ 2020, 12:51 IST
ಅಕ್ಷರ ಗಾತ್ರ

ವಿಜಯಪುರ: ರಾಜ್ಯ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿಆಗಸ್ಟ್‌ 20ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1ರ ವರೆಗೆ ಜಿಲ್ಲಾಧಿಕಾರಿ ಮತ್ತು ಆಯಾ ತಹಶೀಲ್ದಾರ್‌ ಕಚೇರಿಗಳ ಎದುರು ‘ಜನಧ್ವನಿ’ ಧರಣಿ ಸತ್ಯಾಗ್ರಹ ನಡೆಸುವುದಾಗಿ ಜಿಲ್ಲಾ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಪ್ರೊ.ರಾಜು ಅಲಗೂರ ತಿಳಿಸಿದರು.

ನಗರದಲ್ಲಿ ಭಾನುವಾರಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್‌ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ನಡೆದಿರುವ ಭ್ರಷ್ಟಾಚಾರದ ತನಿಖೆಯನ್ನು ಹೈಕೋರ್ಟ್‌ ಮುಖ್ಯ ನ್ಯಾಯಾಧೀಶರಿಗೆ ವಹಿಸಬೇಕು ಎಂದು ಆಗ್ರಹಿಸಿದರು.

ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ, ಎ.ಪಿ.ಎಂ.ಸಿ. ಕಾಯ್ದೆಗೆ ತಿದ್ದುಪಡಿ, ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ಮಾಡುವ ಮೂಲಕ ಬಿಜೆಪಿ ಸರ್ಕಾರ ಜನವಿರೋಧಿ ನೀತಿ ಅನುಸಿರಿಸುತ್ತಿದ್ದು, ತಕ್ಷಣ ಈ ತಿದ್ದುಪಡಿ ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಅತಿವೃಷ್ಟಿಯಿಂದ ಆಗಿರುವ ತೀವ್ರ ಹಾನಿಗೆ ಪರಿಹಾರ ಒದಗಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಅವರು ಆರೋಪಿಸಿದರು.

ಬ್ಲಾಕ್ ಕಾಂಗ್ರೆಸ್‌ ವತಿಯಿಂದ‌ ಜಿಲ್ಲೆಯ ಅಯಾ ತಹಶೀಲ್ದಾರ್‌ ಕಚೇರಿ ಮುಂಭಾಗದಲ್ಲಿ ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರ ನೇತೃತ್ವದಲ್ಲಿ ಅಂದು ಧರಣಿ ಸತ್ಯಾಗ್ರಹ ನಡೆಯಲಿದೆ ಎಂದರು.

ಈ ಧರಣಿಯಲ್ಲಿ ಕಾಂಗ್ರೆಸ್‌ನ ಮಾಜಿ ಸಚಿವರು, ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಪಕ್ಷ ಮುಖಂಡರು ಭಾಗವಹಿಸಲಿದ್ದಾರೆ ಎಂದರು.

ಕಾಂಗ್ರೆಸ್‌ ಮುಖಂಡರಾದ ಅಬ್ದುಲ್‌ಹಮೀದ್‌ ಮುಶ್ರೀಪ್‌, ಜಿಲ್ಲಾ ಸೇವಾದಳದ ಅಧ್ಯಕ್ಷ ಗಂಗಾಧರ ಸಂಬಣ್ಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಐ.ಎಂ.ಇಂಡೀಕರ, ಶಬ್ಬೀರ ಜಾಗೀರದಾರ, ವಸಂತ ಹೊನಮೊಡೆ, ಸಾಹೇಬಗೌಡ ಬಿರಾದಾರ, ಅಡಿವೆಪ್ಪ ಸಾಲಗಲ್, ತಮ್ಮಣ್ಣ ಮೇಲಿನಕೇರಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT