ಸಿಂದಗಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಬಳಿಕ ಡಿ.ಕೆ.ಶಿವಕುಮಾರ್ ಅವರು ವಿಜಯಪುರ ಜಿಲ್ಲೆಗೆಪ್ರಥಮ ಬಾರಿಗೆ ಜುಲೈ 17 ರಂದು ಭೇಟಿ ನೀಡುತ್ತಿದ್ದಾರೆ ಎಂದು ಸಿಂದಗಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 11ಕ್ಕೆ ಸಿಂದಗಿ ಪಟ್ಟಣದ ಮಾಂಗಲ್ಯಭವನದಲ್ಲಿ ನಡೆಯುವದಲಿತ ಸಮುದಾಯದ ಕುಂದುಕೊರತೆಗಳ ಬಗ್ಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಿದರು.
ಸಭೆಯಲ್ಲಿ ಶಾಸಕರಾದ ಎಂ.ಬಿ.ಪಾಟೀಲ, ಯಶವಂತರಾಯಗೌಡ ಪಾಟೀಲ, ಶಿವಾನಂದ ಪಾಟೀಲ ಸೇರಿದಂತೆ ಜಿಲ್ಲೆಯ ಮಾಜಿ ಶಾಸಕರು, ಮಾಜಿ ಸಚಿವರು, ಕಾಂಗ್ರೆಸ್ ಹಿರಿಯ ಮುಖಂಡರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಜಾತಿ, ವರ್ಗ, ಜನಾಂಗಗಳ ಬಗ್ಗೆ ಸಮಾನತೆ ತತ್ವ ಹೊಂದಿದ ಕಾಂಗ್ರೆಸ್ ಇನ್ನೂ ಶಕ್ತಿಯುತವಾಗಬೇಕು. ಜನತೆಯ ವಿಶ್ವಾಸ ದೊರಕಿಸಿಕೊಳ್ಳಬೇಕು. ತನ್ಮೂಲಕ ರಾಜ್ಯದಲ್ಲಿ ಅಧಿಕಾರ ಗದ್ದುಗೆ ಹಿಡಿಯಬೇಕೆಂದು ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರು ರಾಜ್ಯದಾದ್ಯಂತ ಪ್ರವಾಸ ಕೈಗೊಂಡಿದ್ದಾರೆ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜೂ ಆಲಗೂರ ಮಾತನಾಡಿ, ಮಧ್ಯಾಹ್ನ 1.30ಕ್ಕೆ ದೇವರಹಿಪ್ಪರಗಿ ತಾಲ್ಲೂಕಿನ ಪಡಗನೂರ ತಾಂಡಾದಲ್ಲಿ ಲಂಬಾಣಿ ಸಮುದಾಯದವರ ಕುಂದುಕೊರತೆಗಳ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವುರು ಎಂದು ಹೇಳಿದರು.
ಸಂಜೆ 5ಕ್ಕೆ ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆಯುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಿಂದಗಿ, ಪಡಗನೂರ ತಾಂಡಾದಲ್ಲಿ ನಡೆಸುತ್ತಿರುವ ಸಂವಾದವು ಚಾರಿತ್ರ್ಯಿಕ ಸಭೆಯಾಗಲಿದೆ ಎಂದರು.
ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿಠ್ಠಲ ಕೊಳ್ಳುರ ಮಾತನಾಡಿ, ಡಿ.ಕೆ.ಶಿ ಸಿಂದಗಿಗೆ ಪ್ರಥಮ ಬಾರಿಗೆ ಭೇಟಿ ನೀಡಲಿದ್ದಾರೆ ಎಂದರು.
ಮಾಜಿ ಶಾಸಕ ಶರಣಪ್ಪ ಸುಣಗಾರ, ಕಾಂಗ್ರೆಸ್ ಎಂದರೆ ಎಸ್.ಸಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಎಂದರ್ಥ ಎಂದು ಹೇಳಿದರು.
ಜಿಲ್ಲಾ ಪಂಚಾಯ್ತಿ ಮಾಜಿ ಉಪಾಧ್ಯಕ್ಷ ಮಲ್ಲಣ್ಣ ಸಾಲಿ, ಕಾಂಗ್ರೆಸ್ ಮಹಿಳಾ ಘಟಕದ ಶಾರದಾ ಬೆಟಗೇರಿ, ಯುವ ಕಾಂಗ್ರೆಸ್‌ನ ಇರ್ಫಾನ್ ಆಳಂದ, ಕೆಪಿಸಿಸಿ ಸದಸ್ಯ ಮುಸ್ತಾಕ್ ಮುಲ್ಲಾ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಎಂ.ಎ.ಖತೀಬ, ದಲಿತ ಸಂಘಟನೆಯ ರಾಜಶೇಖರ ಕೂಚಬಾಳ, ಚಂದ್ರಕಾಂತ ಸಿಂಗೆ, ವೈ.ಸಿ.ಮಯೂರ, ಪರುಶರಾಮ ಕಾಂಬಳೆ ಪತ್ರಿಕಾಗೋಷ್ಠಿಯಲ್ಲಿ ಇದ್ದರು.
* 2023ರಲ್ಲಿ ವಿಧಾನಸಭೆಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದೆ
–ಅಶೋಕ ಮನಗೂಳಿ, ವಿಧಾನಸಭೆ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.