ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈತ್ರಿ ಧರ್ಮ ಪಾಲಿಸದ ಕಾಂಗ್ರೆಸ್‌: ಎನ್‌ಸಿಪಿ ಆಕ್ಷೇಪ

Published 31 ಮಾರ್ಚ್ 2024, 16:02 IST
Last Updated 31 ಮಾರ್ಚ್ 2024, 16:02 IST
ಅಕ್ಷರ ಗಾತ್ರ

ವಿಜಯಪುರ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಚನೆಯಾಗಿರುವ ‘ಇಂಡಿಯಾ’ ಮೈತ್ರಿಕೂಟದಲ್ಲಿ ಎನ್‌ಸಿಪಿ ಪಾಲುದಾರ ಪಕ್ಷವಾಗಿದ್ದರೂ ರಾಜ್ಯ ಮತ್ತು ಜಿಲ್ಲೆಯಲ್ಲಿ ನಡೆಯುತ್ತಿರುವ ಯಾವುದೇ ಸಭೆ, ಸಮಾವೇಶಕ್ಕೆ ಕಾಂಗ್ರೆಸ್‌ ಮುಖಂಡರು ಆಹ್ವಾನಿಸದೇ ಮೈತ್ರಿಯನ್ನು ಕಡೆಗಣಿಸಿದ್ದಾರೆ’ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಂ.ಬಿರಾದಾರ ಆರೋಪಿಸಿದ್ದಾರೆ.

‘ಕಾಂಗ್ರೆಸ್‌ ನಾಯಕರು ಇನ್ನು ಮುಂದಾದರೂ ಮೈತ್ರಿ ಧರ್ಮ ಪಾಲಿಸಬೇಕು. ಇಲ್ಲವಾದರೆ ಈ ಚುನಾವಣೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ತಟಸ್ಥರಾಗಬೇಕಾಗುತ್ತದೆ’ ಎಂದು ಅವರು ಎಚ್ಚರಿಸಿದ್ದಾರೆ.

‘ಜಿಲ್ಲೆಯ ಮಟ್ಟಿಗೆ ಕಾಂಗ್ರೆಸ್‌ಗೆ ಈ ಬಾರಿ ಗೆಲ್ಲುವ ಅವಕಾಶ ಇದೆ. ಈ ಹುಮ್ಮಸ್ಸಿನಲ್ಲಿ ಕಾಂಗ್ರೆಸ್‌ ಮುಖಂಡರು ಎನ್‌ಸಿಪಿ ಮುಖಂಡರನ್ನು ಕಡೆಗಣಿಸಿದ್ದಾರೆ. ಯಾವುದೇ ಸಭೆ, ಸಮಾವೇಶಕ್ಕೂ ಆಹ್ವಾನಿಸದೇ ನಿರ್ಲಕ್ಷ್ಯ ತೋರಿರುವುದು ಖಂಡನೀಯ’ ಎಂದರು.

ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷರೂ ಆಗಿರುವ ಲೋಕಸಭಾ ಅಭ್ಯರ್ಥಿ ರಾಜು ಆಲಗೂರ ಅವರು ಈ ನಿಟ್ಟಿನಲ್ಲಿ ಎಚ್ಚೆತ್ತುಕೊಳ್ಳಬೇಕು. ಎನ್‌ಸಿಪಿ ಮುಖಂಡರನ್ನು ತಮ್ಮೊಂದಿಗೆ ಕರೆದುಕೊಂಡು ಪ್ರಚಾರ ನಡೆಸಬೇಕು. ಇದರಿಂದ ಆಲಗೂರ ಅವರಿಗೆ ಚುನಾವಣೆಯಲ್ಲಿ ಹೆಚ್ಚು ಮತಗಳಿಸಲು ಅನುಕೂಲವಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT