ಚಡಚಣ: ಕಾಂಗ್ರೆಸ್ ಪಕ್ಷ ಬಲಪಡಿಸಲು ಜಿಲ್ಲೆಯ 17 ಬ್ಲಾಕ್ ಪದಾಧಿಕಾರಿಗಳಿಗೆ ಜಿಲ್ಲಾ ಕೇಂದ್ರದಲ್ಲಿ ಮಾರ್ಚ್ 8ರಂದು ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಚಾರ ಸಮಿತಿ ಮುಖ್ಯ ಸಂಯೋಜಕ ಶರಣಪ್ಪ ಕೊಟಗಿ ಹೇಳಿದರು.

ಸಮೀಫದ ಝಳಕಿ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕಾರ್ಯಾಗಾರದಲ್ಲಿ 1947ರಿಂದ ಕಾಂಗ್ರೆಸ್ ಪಕ್ಷ ದೇಶಕ್ಕೆ ನೀಡಿದ ಕೊಡುಗೆ, ಸಾಧನೆ ಹಾಗೂ ಕೇಂದ್ರ ಸರ್ಕಾರದ ವೈಫಲ್ಯ ಹಾಗೂ ಸಂಸತ್ತಿನಲ್ಲಿ ಯಾವುದೇ ಚರ್ಚೆ ನಡೆಸದೇ ಪ್ರಧಾನಿ ಮೋದಿ ಹಾಗೂ ಟ್ರಂಪ್ ನಡುವೆ ಏರ್ಪಟ್ಟ ಅಸಂವಿಧಾನಿಕ ಒಪ್ಪಂದವನ್ನು ಕಾಂಗ್ರೆಸ್ ಕಾರ್ಯಕರ್ತರ ಮೂಲಕ ಜನತೆಗೆ ತಿಳಿಸುವುದಾಗಿದೆ. ರಾಜ್ಯ ಸರ್ಕಾರ ಜನಪರ ಯೋಜನೆ, ಪಂಚ ಗ್ಯಾರಂಟಿಗಳನ್ನು ಅನುಷ್ಠಾನ ಗೊಳಿಸಿ ನುಡಿದಂತೆ ನಡೆದ ಸರ್ಕಾರ ಎಂಬ ಹೆಮ್ಮ ಸಾರ್ವಜನಿಕರಲ್ಲಿದೆ ಎಂದರು.

ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಮಾತನಾಡಿ, ರೈತರ, ಮಹಿಳೆಯರು ಹಾಗೂ ಆರ್ಥಿಕವಾಗಿ ಹಿಂದುಳಿದ ಸಮುದಾಯಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. ಪಂಚ ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ದೇಶಕ್ಕೆ ಮಾರಿಯಾಗಿದೆ. ಇದನ್ನು ಸಹಿಸದ ಬಿಜೆಪಿ ಮುಖಂಡರು ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವುದು ಖಂಡನೀಯ ಎಂದರು.

ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಚಾರ ಸಮಿತಿ ಕಾರ್ಯದರ್ಶಿ ಜಿ.ಎಸ್. ಮಹಾಬಳೇಶ್ವರ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಸರ್ಪರಾಜ ಮಿರ್ದೆ, ಬಳ್ಳೊಳ್ಳಿ ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಸದಾಶಿವ ಮಠ, ಮುಖಂಡರಾದ ಶಿವು ಸಂಪಿಗೇರ, ಶ್ರೀಶೈಲ ಜಾಧವ, ಸುನೀಲ ಕ್ಷತ್ರಿ, ಅಬ್ದುಲ್ ಹಿಂಗಣಿಕರ, ಸಣ್ಣಪ್ಪ ತಳವಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.