ಬುಧವಾರ, ಅಕ್ಟೋಬರ್ 28, 2020
18 °C
ಕಾಂಗ್ರೆಸ್‌ ಮುಖಂಡರಿಂದ ವಿನೂತನ ಪ್ರತಿಭಟನೆ

ವಿಜಯಪುರ: ಗುಂಡಿಬಿದ್ದ ರಸ್ತೆಗೆ ಗರಸು ಹಾಕಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ನಗರದ ರಸ್ತೆಗಳಲ್ಲಿ ಬಿದ್ದಿರುವ ಗುಂಡಿ, ತೆಗ್ಗುಗಳಿಗೆ ಗರಸು ತುಂಬುವ ಮೂಲಕ ಕಾಂಗ್ರೆಸ್‌ ಮುಖಂಡರು ಬುಧವಾರ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಮುಖಂಡ ಅಬ್ದುಲ್‍ ಹಮೀದ್ ಮುಶ್ರಿಫ್‌ ಮಾತನಾಡಿ, ಗುಂಡಿ ಬಿದ್ದಿರುವ ನಗರ ರಸ್ತೆಗಳನ್ನು ದುರಸ್ತಿಗೊಳಿಸುವಂತೆ ಆಗ್ರಹಿಸಿ ವಿವಿಧ ಸಂಘ-ಸಂಸ್ಥೆಗಳು ಹಾಗೂ ಕಾಂಗ್ರೆಸ್‍ ಪಕ್ಷದಿಂದ ನಗರದಲ್ಲಿ ಹಲವು ಬಾರಿ ಮನವಿ ಸಲ್ಲಿಸಿದರು ಪಾಲಿಕೆ ಅಧಿಕಾರಿಗಳು ಹಾಗೂ ಶಾಸಕರು ಸ್ಪಂದಿಸದೇ ಇರುವುದು ಖಂಡನೀಯ ಎಂದರು.

ಮಳೆ ನೀರು ನಿಂತ ದೊಡ್ಡ, ದೊಡ್ಡ ತೆಗ್ಗುಗಳಲ್ಲಿ ಬೈಕ್ ಹಾಗೂ ಕಾರು ಇನ್ನಿತರ ವಾಹನ ಸವಾರರು ಬಿದ್ದು  ಅಪಾಯ ಮಾಡಿಕೊಂಡಿದ್ದಾರೆ. ನಗರದ ಜನತೆ ಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.

ಪಾಲಿಕೆ ಆಯುಕ್ತರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೆ ಎಚ್ಚೆತ್ತುಕೊಂಡು ರಸ್ತೆ ನಿರ್ಮಾಣ ಮಾಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಮಾಡಬೇಕಾಗುತ್ತದೆ ಎಂದು ಮುಶ್ರೀಫ್ ಎಚ್ಚರಿಸಿದರು.

ಜಿಲ್ಲಾ ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ವಿದ್ಯಾರಾಣಿ ತುಂಗಳ, ಮುಖಂಡರಾದ ಜಮೀರ್‌ ಅಹ್ಮದ ಬಕ್ಷಿ, ಆರತಿ ಶಹಾಪುರ, ಇರ್ಪಾನ್‌ ಶೇಖ್‌, ಮಹಮ್ಮದ ರಫಿಕ್ ಟಪಾಲ್, ಗಂಗಾಧರ ಸಂಬಣ್ಣಿ, ಅಬ್ದುಲ್‍ಖಾದರ್‌ ಖಾದೀಮ, ಸಜ್ಜಾದೆಪಿರಾ ಮುಶ್ರಿಫ, ವಸಂತ ಹೊನಮೊಡೆ, ಜಯಶ್ರೀ ಭಾರತೆ, ಮಂಜುಳಾ ಜಾಧವ, ಮಂಜುಳಾ ಗಾಯಕವಾಡ, ಅಲ್ತಾಫ ಅಸ್ಕಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು