ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರದಲ್ಲಿ ಕಾಂಗ್ರೆಸ್ ಸಮಾವೇಶಕ್ಕೆ ಕ್ಷಣಗಣನೆ: ರಾಹುಲ್, ಸಿದ್ದರಾಮಯ್ಯ ಭಾಗಿ

Published 26 ಏಪ್ರಿಲ್ 2024, 7:27 IST
Last Updated 26 ಏಪ್ರಿಲ್ 2024, 7:27 IST
ಅಕ್ಷರ ಗಾತ್ರ

ವಿಜಯಪುರ: ಮೇ 7ರಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಬ್ಬರದ ಪ್ರಚಾರಕ್ಕೆ ಶುಕ್ರವಾರ ಚಾಲನೆ ನೀಡಲು ಸಿದ್ಧತೆ‌ ಮಾಡಿಕೊಂಡಿದೆ.

ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು ವಿಜಯಪುರ, ಬಳ್ಳಾರಿಯಲ್ಲಿ ಬಹಿರಂಗ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ವಿಜಯಪುರ‌ ನಗರದ ಸೋಲಾಪುರ ರಸ್ತೆಯಲ್ಲಿರುವ ಬಿಎಲ್ ಡಿಇ ಶಿಕ್ಷಣ ಸಂಸ್ಥೆಯ ನ್ಯೂ ಕ್ಯಾಂಪಸ್ ನಲ್ಲಿ ನಿರ್ಮಿಸಲಾಗಿರುವ ಬೃಹತ್ ವೇದಿಕೆಯಲ್ಲಿ ಮಧ್ಯಾಹ್ನ 1ಕ್ಕೆ ನಡೆಯುವ ಕಾಂಗ್ರೆಸ್ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ.

ವಿಜಯಪುರದಲ್ಲಿ ನಡೆಯುವ ಕಾಂಗ್ರೆಸ್ ಸಮಾವೇಶದಲ್ಲಿ ರಾಹುಲ್ ಗಾಂಧಿ ಜೊತೆಗೆ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಚಿವರಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆ.ಸಿ.ವೇಣುಗೋಪಾಲ್ ಹಾಗೂ ಜಿಲ್ಲೆಯ ಶಾಸಕರಾದ ಯಶವಂತ ರಾಯಗೌಡ ಪಾಟೀಲ, ಅಶೋಕ ಮನಗೂಳಿ, ಸಿ.ಎಸ್.ನಾಡಗೌಡ, ವಿಠಲ ಕಟಕಧೋಂಡ ಮತ್ತಿತರ ಮುಖಂಡರು ಪಾಲ್ಗೊಳ್ಳುತ್ತಿದ್ದಾರೆ.

ಬಿಸಿಲಿನ ಅಬ್ಬರ ಅಧಿಕವಾಗಿದೆ. ಉಷ್ಣಾಂಶ 42 ಡಿಗ್ರಿ ಸೆಲ್ಸಿಯಸ್ ತಲುಪಿದ್ದರೂ ಲೆಕ್ಕಿಸದೇ ಜನ ತಂಡೋಪತಂಡವಾಗಿ ಸಮಾವೇಶಕ್ಕೆ ಆಗಮಿಸುತ್ತಿದ್ದಾರೆ. ಸುಮಾರು 50 ಸಾವಿರಕ್ಕೂ ಅಧಿಕ ಜನ ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದ್ದು , ಇದೊಂದು ಐತಿಹಾಸಿಕ ಸಮಾವೇಶ ಆಗಲಿದೆ ಎಂಬುದು ಸಚಿವ ಎಂ.ಬಿ.ಪಾಟೀಲ ಅಭಿಪ್ರಾಯವಾಗಿದೆ.

ಕಾಂಗ್ರೆಸ್ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ನಗರದ ಎಲ್ಲೆಡೆ ಕಾಂಗ್ರೆಸ್ ಬಾವುಟ, ನಾಯಕರ ಕಟೌಟ್ ಗಳು ರಾರಾಜಿಸುತ್ತಿವೆ. ನಾಯಕರ ಪರ ಘೋಷಣೆಗಳು ಮೊಳಗುತ್ತಿದ್ದು, ಕಾರ್ಯಕರ್ತರ ಉತ್ಸಾಹ ಇಮ್ಮಡಿಯಾಗಿದೆ.

ಸಮಾವೇಶದಲ್ಲಿ ಜನರು ಕೂರಲು ಜರ್ಮನ್ ತಂತ್ರಜ್ಞಾನದ ಬೃಹತ್ ಪೆಂಡಾಲ್ ಅಳವಡಿಸಲಾಗಿದೆ. ಇಷ್ಟಾದರೂ ಬಿಸಿಲಿನ ಝಳಕ್ಕೆ ಜನ ಹೈರಾಣಾಗದಿರಲಿ ಎಂದು

ಕುಡಿಯಲು ನೀರಿನ ವ್ಯವಸ್ಥೆ, ಗಾಳಿಗಾಗಿ ಪ್ಯಾನ್ ಅಳವಡಿಸಲಾಗಿದೆ‌.

ಮಜ್ಜಿಗೆ, ತಂಪು ಪಾನೀಯ, ಐಸ್ ಕ್ರೀಮ್, ಹಣ್ಣು ಮಾರಾಟವೂ ಜೋರಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT