ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರನ್ನು ಕೊರೊನಾ ವಾರಿಯರ್ಸ್‌ ಎಂದು ಪರಿಗಣಿಸಿ

ವಿಧಾನ ಪರಿಷತ್‌ ಸದಸ್ಯ ಅರುಣ ಶಹಾಪೂರ ಒತ್ತಾಯ
Last Updated 17 ಮೇ 2021, 15:38 IST
ಅಕ್ಷರ ಗಾತ್ರ

ವಿಜಯಪುರ: ಶಿಕ್ಷಕರು, ಉಪನ್ಯಾಸಕರು, ಪ್ರಾಧ್ಯಾಪಕರು ಹಾಗೂ ಶಿಕ್ಷಣ ಇಲಾಖೆ ಸಿಬ್ಬಂದಿಯನ್ನು ಕೊರೊನಾ ವಾರಿಯರ್ಸ್‌ ಎಂದು ಪರಿಗಣಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಅರುಣ ಶಹಾಪೂರ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಸುಧಾರಕರ್‌ ಅವರನ್ನುಶಹಾಪೂರ ಸೋಮವಾರ ಭೇಟಿ ಮಾಡಿ ಈ ಸಂಬಂಧ ಮನವಿ ಸಲ್ಲಿಸಿದ್ದಾರೆ.

ಶಿಕ್ಷಣ ಇಲಾಖೆಯ ಶಿಕ್ಷಕರು, ಉಪನ್ಯಾಸಕರು, ಪ್ರಾಧ್ಯಾಪಕರು ಹಾಗೂ ಬೋಧಕೇತರ ಸಿಬ್ಬಂದಿಯನ್ನು ಕೋವಿಡ್‌ ಕಾರ್ಯಕ್ಕಾಗಿ ತೊಡಗಿಸಿಕೊಳ್ಳಲಾಗಿದೆ. ಆದರೆ, ಅವರನ್ನು ಇದುವರೆಗೂ ಕೊರೊನಾ ವಾರಿಯರ್ಸ್‌ ಪರಿಗಣಿಸಿಲ್ಲ ಎಂದು ಹೇಳಿದ್ದಾರೆ.

ಬಹಳಷ್ಟು ಶಿಕ್ಷಕರು, ಶಿಕ್ಷಣ ಇಲಾಖೆ ಸಿಬ್ಬಂದಿ ಕೋವಿಡ್‌ ಸೋಂಕಿನಿಂದಾಗಿ ಸಾವಿಗೀಡಾಗಿದ್ದಾರೆ. ಆಗುತ್ತಲೂ ಇದ್ದಾರೆ. ಹೀಗಾಗಿ ಅವರನ್ನು ಕೊರೊನಾ ವಾರಿಯರ್ಸ್‌ ಎಂದು ಪರಿಗಣಿಸಿ, ಅವರಿಗೆ ಅಗತ್ಯವಾದ ಸೌಲಭ್ಯಗಳನ್ನು ನೀಡಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT