ಭಾನುವಾರ, ಮೇ 22, 2022
24 °C
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೋಳಸಂಗಿ

ವಿಜಯಪುರದಲ್ಲಿ 21 ಬಸ್ ಸೆಲ್ಟರ್‌ ನಿರ್ಮಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ನಗರದ ವಿವಿಧೆಡೆ 21 ಬಸ್ ಸೆಲ್ಟರ್‌ ನಿರ್ಮಾಣಕ್ಕೆ ಅನೂಮೊದನೆ ನೀಡಲಾಗಿದೆ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೋಳಸಂಗಿ ತಿಳಿಸಿದರು.

ಪ್ರಾಧಿಕಾರದ ಸಭಾಭವನದಲ್ಲಿ ಸೋಮವಾರ ನಡೆದ ವಾರ್ಷಿಕ ಬಜೆಟ್‌ ಮಂಡನೆ ಹಾಗೂ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.

ನಗರದ ವಿವಿಧ ಉದ್ಯಾನಗಳಲ್ಲಿ ಸಾರ್ವಜನಿಕರಿಗೆ ವಾಕಿಂಗ್ ಟ್ರ್ಯಾಕ್‍ ನಿರ್ಮಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇಟಗಿ ಪೆಟ್ರೋಲ್ ಬಂಕ್ ಹತ್ತಿರ ತರಕಾರಿ ಪ್ಲಾಟ್‍ಫಾರ್ಮ್‌ ತೆರೆಯಲು ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಿದರು.

ಶಾಸಕ ಬಸವನಗೌಡ ಪಾಟೀಲ ಯತ್ನಾಳ, ನಗರದ ವಿವಿಧ ಸರ್ಕಾರಿ ಕಟ್ಟಡಗಳ ಬಾಕಿ ಕಾಮಗಾರಿಗಳನ್ನು ಕೂಡಲೆ ಪೂರ್ಣಗೊಳಿಸಿ, ಅನುದಾನವನ್ನು ಸಮರ್ಪಕವಾಗಿ ಬಳಸಬೇಕು. ಟೆಂಡರ್ ಕಾಮಗಾರಿಗಳ ಸಮರ್ಪಕ ದಾಖಲೆಗಳನ್ನು ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ನಗರದಲ್ಲಿ ಬೀದಿದೀಪಗಳ ನಿರ್ವಹಣೆ ಮಾಡಬೇಕು, ಒಳಚರಂಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು. ಮುಂಬರುವ ಬೇಸಿಗೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಈಗಿನಿಂದಲೇ ಅವಶ್ಯಕ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಪರಿಶೀಲಿಸಬೇಕು ಎಂದರು. 

ಬಾಕಿ ಇರುವ ಮೂಲ ಸೌಕರ್ಯಗಳ ಕಾಮಗಾರಿಯನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಮತ್ತು ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಮುಂದೆ ದ್ವಿಚಕ್ರ ವಾಹನ ಮತ್ತು ಸೈಕಲ್ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಪ್ರಮುಖ ವೃತ್ತಗಳಲ್ಲಿ ಹೈಮಾಸ್ಟ್‌ ದೀಪಗಳನ್ನು ಅಳವಡಿಸಬೇಕು. ಉದ್ಯಾನಗಳಲ್ಲಿ ಅವಶ್ಯಕತೆವಿರುವ ಕಡೆ ಸಿಮೆಂಟ್ ಆಸನಗಳ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು.

ನಾಗಠಾಣ ಶಾಸಕ ದೇವಾನಂದ ಚವ್ಹಾಣ, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಲಕ್ಷ್ಮಣ ಜಾಧವ್, ಸಂಗಣ್ಣ ಕರಡಿ, ವಿಕ್ರಮ ಗಾಯಕವಾಡ, ರೇವಣಸಿದ್ಧಪ್ಪ ಜಿರ್ಲಿ, ಸರೋಜಿನಿ ಏವೂರ, ವಿಡಿಎ ಆಯುಕ್ತ ವಿಜಯಕುಮಾರ ಅಜೂರೆ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು