ನಿಡಗುಂದಿ ತಾಲ್ಲೂಕಿನ ಬ್ಯಾಲಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 30ಕ್ಕು ಅಧಿಕ ಗ್ರಾಮಸ್ಥರು ಅಸ್ವಸ್ಥಗೊಂಡ ಹಿನ್ನೆಲೆ ಗ್ರಾಮಕ್ಕೆ ಡಿಹೆಚ್ಓ ಡಾ.ಸಂಪತ್ ಗುಣಾರಿ ಹಾಗೂ ವೈದ್ಯಕೀಯ ತಂಡ ಗ್ರಾಮಕ್ಕೆ ಭೇಟಿ ನೀಡಿ ಹಳ್ಳದ ಬಳಿಯ ಬೋರ್ ವೆಲ್ ಸ್ಥಳ ಪರಿಶೀಲನೆ ನಡೆಸಿದರು.
ಜಿಲ್ಲಾ ಆರೋಗ್ಯಾಧಿಕಾರಿಗಳು ಹಾಗೂ ನಾನು ಬ್ಯಾಲಿಹಾಳ ಗ್ರಾಮಕ್ಕೆ ಭೇಟಿ ನೀಡಿದ್ದೇವೆ. ಬ್ಯಾಲಿಹಾಳದಲ್ಲಿ ತಾತ್ಕಾಲಿಕ ಒಪಿಡಿ ಘಟಕ ಸ್ಥಾಪಿಸಲಾಗಿದೆ. ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡ 49 ಜನರ ಆರೋಗ್ಯ ತಪಾಸಣೆ ಮಾಡಲಾಗಿದೆ. ಅದರಲ್ಲಿ 30 ಜನರು ಹೆಚ್ಚಿನ ಚಿಕಿತ್ಸೆಗಾಗಿ ತಾಲ್ಲೂಕು ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು ಸದ್ಯ 9 ಜನ ಬಸವನಬಾಗೇವಾಡಿ ಚಿಕಿತ್ಸೆ ಪಡೆಯುತ್ತಿದ್ದು ಉಳಿದವರು ಡಿಶ್ಚಾರ್ಜ್ ಆಗಿದ್ದಾರೆ.