ವಿಜಯಪುರ: ‘ಅಂಗವಿಕಲರು ಕೂಡ ಸಾಮಾನ್ಯರಂತೆ ಬದುಕುವ ಬಯಕೆಯಿರುತ್ತದೆ ಎಂಬುದನ್ನು ಸಮಾಜದ ಇತರರು ಅರಿತು ಅವರ ಬೆಳವಣಿಗೆಗೆ ಸಹಕರಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ಅಂಗವಿಕಲರ ಸಬಲೀಕರಣಕ್ಕಾಗಿ ಉಚಿತವಾಗಿ ಸಾಧನ ಸಲಕರಣೆಯನ್ನು ನೀಡುತ್ತಿದೆ’ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಆಶ್ರಯದಲ್ಲಿ ಮಂಗಳವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಂಗವಿಕಲರ ಹಾಗೂ ಹಿರಿಯ ನಾಗರಿಕರಿಗೆ ಉಚಿತ ಸಾಧನ ಸಲಕರಣೆಗಳ ವಿತರಿಸಿ ಅವರು ಮಾತನಾಡಿದರು.

ಅಂಗವಿಕಲರಿಗಾಗಿ ಸಾಧನ ಸಲಕರಣೆಗಳನ್ನು ಸಮರ್ಪಕವಾಗಿ ಉಪಯೋಗಿಸಬೇಕು, ಅಧಿಕಾರಿಗಳು ಕೂಡ ಅರ್ಹತೆ ಹೊಂದಿದವರಿಗೆ ಮಾತ್ರ ಸಾಧನ ಸಲಕರಣಗಳು ದೊರೆಯುವಂತೆ ಕ್ರಮ ವಹಿಸಬೇಕು, ಯೋಜನೆಗಳ ಫಲಾನುಭವಿಗಳು ಸಾಧನ ಸಲಕರಣೆಗಳನ್ನು ಸದುಪಯೋಗ ಪಡೆದುಕೊಂಡು ಮುಖ್ಯ ವಾಹಿನಿಗೆ ಬರುವಂತೆ ಕಿವಿಮಾತು ಹೇಳಿದರು.

ಜಿಲ್ಲಾಧಿಕಾರಿ ಟಿ.ಭೂಬಾಲನ್, ‘ಅಂಗವಿಕಲರಿಗೆ ಇರುವ ಸಮಸ್ಯೆಗಳನ್ನು ಗುರುತಿಸಿ ಅಗತ್ಯವಾದ ಸಾಧನ ಸಲಕರಣೆಗಳನ್ನು ನೀಡಿ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಈ ಯೋಜನೆಗಳು ಫಲಾನುಭವಿಗಳಿಗೆ ಸಹಕಾರಿಯಾಗಿವೆ’ ಎಂದರು.

ಜಿಲ್ಲೆಯಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಿಂದ ಬಡ ಅಂಗವಿಕಲ ಮಕ್ಕಳಿಗಾಗಿ ವಿಶೇಷ ಶಾಲೆ ನಿರ್ಮಾಣ ಹಂತದಲ್ಲಿದ್ದು, ಮುಂದಿನ ವರ್ಷ ಕಾರ್ಯಾರಂಭ ಮಾಡಲಿದೆ. ಇಲ್ಲಿ ಅಂಗವಿಕಲ ಮಕ್ಕಳಿಗೆ ಸಂಪೂರ್ಣವಾಗಿ ಉಚಿತ ಶಿಕ್ಷಣ ನೀಡಲಾಗುವುದು, ಜಿಲ್ಲೆಯಲ್ಲಿರುವ ಅಂಗವಿಕಲ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ತಿಳಿಸಿದರು.

ಅಂಗವಿಕಲ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಸವಿತಾ ಕಾಳೆ ಮಾತನಾಡಿ, ವಿಜಯಪುರ ಹಾಗೂ ಬಸವನ ಬಾಗೇವಾಡಿ ತಾಲ್ಲೂಕಿನ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಸಾಧನ ಸಲಕರಣೆಗಳನ್ನು ವಿತರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಅರ್ಹ ಅಂಗವಿಕಲರಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೆ.ಕೆ ಚವ್ಹಾಣ, ಅಲಿಂಕೋ ಡೆಪ್ಯೂಟಿ ಮ್ಯಾನೇಜರ್ ಶಿವಕುಮಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.