ಶನಿವಾರ, ಡಿಸೆಂಬರ್ 5, 2020
24 °C
ಪೊಲೀಸ್‌ ಹುತಾತ್ಮ ದಿನಾಚರಣೆ; ಮಡಿದವರಿಗೆ ನಮನ

ಪರಿವಾರವನ್ನು ಪಣಕ್ಕಿಟ್ಟ ಪೊಲೀಸರು: ಅಗರವಾಲ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಪೊಲೀಸರು ಈ ಬಾರಿ ತಮ್ಮ ಪರಿವಾರವನ್ನು ಪಣಕ್ಕಿಟ್ಟಿ, ಕೊರೊನಾ ವಾರಿಯರ್ಸ್‌ ಆಗಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಪಮ್‌ ಅಗರವಾಲ್‌ ಹೇಳಿದರು.

ನಗರದ ಜಿಲ್ಲಾ ಪೊಲೀಸ್‌ ಕವಾಯತ್ ಮೈದಾನದಲ್ಲಿ ಬುಧವಾರ ಆಯೋಜಿಸಲಾಗಿದ್ದ ಪೊಲೀಸ್‌ ಹುತಾತ್ಮರ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ದೇಶದ ಬಾಹ್ಯ ಹಾಗೂ ಆಂತರಿಕ ರಕ್ಷಣೆ ಸಂದರ್ಭದಲ್ಲಿ ಉಗ್ರರು, ನಕ್ಸಲರ ವಿರುದ್ಧ ಹೋರಾಡುವಾಗ ಮತ್ತು ಗಲಭೆಗಳನ್ನು ನಿಯಂತ್ರಿಸುವಾಗ ಪೊಲೀಸರು ಹುತಾತ್ಮರಾಗುತ್ತಿದ್ದಾರೆ. ಆದರೆ, ಈ ವರ್ಷ ಪ್ರಪಂಚಕ್ಕೆ ಎದುರಾಗಿರುವ ಕೋವಿಡ್‌ ನಿಯಂತ್ರಣದಲ್ಲೂ ಪೊಲೀಸರು ಕರ್ತವ್ಯ ನಿರ್ವಹಿಸುವ ವೇಳೆ ಸಾವನಪ್ಪಿದ್ದಾರೆ ಎಂದರು.

ದೇಶದಲ್ಲಿ ಪ್ರತಿ ವರ್ಷವು ಸಾಕಷ್ಟು ಪೊಲೀಸರು ತಮ್ಮ  ಕರ್ತವ್ಯ ನಿರ್ವಹವಣೆಯಲ್ಲಿ ಶೂರತನದಿಂದ ಹೋರಾಡಿ ವೀರಶ್ವರ್ಗ ಹೊಂದುತ್ತಿರುವರು. ಅವರ ಕಾರ್ಯದ ನೆನಪಿಗಾಗಿ ಪೊಲೀಸ್‌ ಹುತಾತ್ಮರ ದಿನಾಚರಣೆಯನ್ನು ಪ್ರತಿ ವರ್ಷ ಅಕ್ಟೋಬರ್‌ 21ರಂದು ಆಚರಿಸಲಾಗುತ್ತಿದೆ ಎಂದರು.

ಈ ವರ್ಷ ದೇಶದಲ್ಲಿ 264 ಜನ ಪೊಲೀಸರು ತಮ್ಮ ಕರ್ತವ್ಯದ ವೇಳೆ ಹುತಾತ್ಮರಾಗಿದ್ದಾರೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಪಿ. ಸುನೀಲ್‌ ಕುಮಾರ್‌ ಮಾತನಾಡಿ, ದೇಶದ ಆಂತರಿಕ ರಕ್ಷಣೆ ಸಂದರ್ಭದಲ್ಲಿ ಮಡಿದ ಪೊಲೀಸರಿಗೆ ಮತ್ತು ಅವರ ಕುಟುಂಬಕ್ಕೆ ಗೌರವ ಸಲ್ಲಿಸಬೇಕಾಗಿರುವುದು ಪ್ರತಿಯೊಬ್ಬರ ನಾಗರಿಕನ ಕರ್ತವ್ಯ ಎಂದರು ಹೇಳಿದರು.

ಪೊಲೀಸ್‌ ಕಾರ್ಯವೈಖರಿ ಬಗ್ಗೆ ಸಾಕಷ್ಟು ಟೀಕೆ, ಟಿಪ್ಪಣಿಗಳು ಕೇಳಿಬರುತ್ತವೆ. ಯಾರೋ ಒಬ್ಬರ ತಪ್ಪಿನಿಂದ ಇಡೀ ಇಲಾಖೆಗೆ ಕೆಟ್ಟ ಹೆಸರು ಬರುತ್ತಿದೆ. ಇಲಾಖೆ ಮೇಲೆ ಜನರಿಗೆ ವಿಶ್ವಾಸ ಬರುವಂತೆ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು ಎಂದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ರಾಮ ಅರಸಿದ್ಧಿ ಇದ್ದರು.

ಪೊಲೀಸ್‌ ಹುತಾತ್ಮಕರ ಸ್ಮಾರಕಕ್ಕೆ ಗಣ್ಯರು ಮಾಲಾರ್ಪಣೆ ಮಾಡಿದರು. ಕವಾಯತ್‌ ತಂಡದಿಂದ ಮೂರು ಸುತ್ತು ಕುಶಾಲ ತೋಪು ಸಿಡಿಸಿ, ಪೊಲೀಸ್‌ ಬ್ಯಾಂಡ್‌ ನುಡಿಸಿ ಹಾಗೂ ಎರಡು ನಿಮಿಷ ಮೌನಾಚರಣೆ ಮೂಲಕ ಮಡಿದ ಪೊಲೀಸರಿಗೆ ಗೌರವ ನಮನ ಸಲ್ಲಿಸಲಾಯಿತು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.