ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ತಡೆಗೆ ಲಸಿಕೆಯೇ ಪರಿಹಾರ: ಯತ್ನಾಳ

Last Updated 1 ಜೂನ್ 2021, 11:44 IST
ಅಕ್ಷರ ಗಾತ್ರ

ವಿಜಯಪುರ: ನಗರದ 45 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಕೋವಿಡ್ ಲಸಿಕೆಯನ್ನು ಹಾಕಿಸಿಕೊಳ್ಳಿ. ಲಸಿಕೆ ಪಡೆದ ಎಲ್ಲರೂ ಈ ಕೋವಿಡ್‌ನಿಂದ ಪಾರಾಗಬಹುದಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ನಗರದ ಕಾಲೇಬಾಗ್‌ ಜೈ ಹನುಮಾನ್‌ ಗುಡಿ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಉಚಿತ ಕೋವಿಡ್ ಲಸಿಕೆ ಆಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು

ಲಸಿಕೆ ಪಡೆದಾಗಲೂ ಸಹ ಕೆಲವೊಮ್ಮೆ ರೋಗ ಲಕ್ಷಣ ಕಾಣಬಹುದು. ಆದರೆ, ಪ್ರಾಣಕ್ಕೆ ಏನು ತೊಂದರೆಯಾಗುವುದಿಲ್ಲ, ತೀವ್ರ ಸ್ವರೂಪದ ಅಪಾಯಗಳಾಗುವುದಿಲ್ಲ. ರೋಗದಿಂದ ಆರೋಗ್ಯದಲ್ಲಿ ತೀವ್ರ ತೊಂದರೆಯಾಗುವುದನ್ನು ತಪ್ಪಿಸಲು ಸಹಕಾರಿಯಾಗುತ್ತದೆ ಆದ್ದರಿಂದ ತಪ್ಪದೆ ಸಲಿಕೆ ಪಡೆಯಿರಿ ಎಂದರು.

ಲಸಿಕಾ ಕೇಂದ್ರಗಳಲ್ಲಿ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್‌ ಪ್ರಥಮ ಡೋಸ್ ಲಸಿಕೆ ಹಾಗೂ ಎರಡನೇ ಡೋಸ್ ಲಸಿಕೆ ಹಾಕುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಸದಸ್ಯರಾದ ವಿಕ್ರಮ್ ಗಾಯಕವಾಡ, ಡಾ.ಜನ್ನತ್, ಡಾ.ಮದಿಯಾ, ಚಂದ್ರು ಚೌಧರಿ, ಸಂತೋಷ ಪಾಟೀಲ, ದಾದಾಸಾಹೇಬ್ ಬಾಗಾಯತ್, ಸದಾನಂದ ಗುನ್ನಾಪೂರ, ಜವಾಹರ ಗೋಸಾವಿ, ಶಿವು ದೇವಕರ, ಲಕ್ಷ್ಮಣ ಅಥಣಿ, ಭೀಮು ಮಾಶ್ಯಾಳ, ಮಾಣಿಕ್‌ಚಂದ ಗೊಲಾಂಡೆ, ರಾಜಶೇಖರ ಭಜಂತ್ರಿ, ಪ್ರಕಾಶ ಚವ್ಹಾಣ, ನಾಗರಾಜ ಮುಳವಾಡ, ಸಿದ್ದು ಪೂಜಾರಿ, ಶಾಮರಾಯ ದೇವಕರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT