ವಿಜಯಪುರ: ಪಕ್ಷಕ್ಕಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ ಖಾಲಿ ಇರುವ ನಿಗಮ, ಮಂಡಳಿಗಳಿಗೆ ಅಧ್ಯಕ್ಷ, ಸದಸ್ಯರನ್ನಾಗಿ ಶೀಘ್ರ ನೇಮಕ ಮಾಡಲು ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರ ಗಮನಕ್ಕೆ ತರಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯಕ್ಕೆ ಬುಧವಾರ ಭೇಟಿ ನೀಡಿ, ಪಕ್ಷದ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

‘ಪಕ್ಷದ ತತ್ವ, ಸಿದ್ಧಾತ, ಕಾರ್ಯಕ್ರಮದ ಬಗ್ಗೆ ಮಾತನಾಡುವವರನ್ನು ಪಕ್ಷ ಗುರುತಿಸಬೇಕು, ಅವರಿಂದ ಮಾತ್ರ ಪಕ್ಷಕ್ಕೆ ಅನುಕೂಲವಾಗಲಿದೆ’ ಎಂದರು.

‘ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆ ಬಗ್ಗೆ ಸಮರ್ಥವಾಗಿ ಜನರಿಗೆ ತಿಳಿಹೇಳಬೇಕು, ಬಿಜೆಪಿ, ಜೆಡಿಎಸ್ ಮುಖಂಡರ ಅಪಪ್ರಚಾರಕ್ಕೆ ಸೂಕ್ತ ಉತ್ತರ ನೀಡಬೇಕು’ ಎಂದರು.

ಕೇಂದ್ರ ಬಿಜೆಪಿ ಸರ್ಕಾರ ಉದ್ಯಮಿಗಳ ಸಾಲ ಮನ್ನಾ ಮಾಡಿರುವುದು, ಈ ದೇಶವನ್ನ ಕೊಳ್ಳೆಹೊಡೆದುಕೊಂಡು ಹೋಗುತ್ತಿರುವುದನ್ನು ಜನರಿಗೆ ಮನದಟ್ಟು ಮಾಡಬೇಕು’ ಎಂದು ತಿಳಿಸಿದರು.

ಪಕ್ಷದ ಕಾರ್ಯಕರ್ತರ ಅಹವಾಲನ್ನು ಸ್ವೀಕರಿಸಿದರು. ವಿಜಯಪುರ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಎಸ್. ಲೋಣಿ, ಶಾಸಕ ವಿಠ್ಠಲ ಕಟಕಧೋಂಡ, ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಮುಖಂಡರಾದ ಹಮೀದ್ ಮುಶ್ರೀಫ್, ಗಂಗಾಧರ ಸಂಬಣ್ಣಿ, ವಿಜಯಕುಮಾರ ಘಾಟಗೆ, ವೈಜನಾಥ ಕರ್ಪೂರಮಠ, ಎಂ. ಎಂ. ಮುಲ್ಲಾ, ಜಮೀರ ಬಕ್ಷಿ, ಆರತಿ ಶಾಹಪೂರ, ಶ್ರೀದೇವಿ ಉತ್ಲಾಸ್ಕರ, ಸಂಗೀತಾ ನಾಡಗೌಡ, ಸಬಿನಾ ಮಂಟೂರ, ಭಾರತಿ ನಾವಿ, ಲಕ್ಷ್ಮೀ ಕ್ಷೀರಸಾಗರ, ಭಾರತಿ ಹೊಸಮನಿ, ಶಮೀಮ ಅಕ್ಕಲಕೋಟ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.