ಬುಧವಾರ, ಜೂನ್ 16, 2021
28 °C

ಕೋವ್ಯಾಕ್ಸಿನ್ ಲಸಿಕಾ ಕೇಂದ್ರ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಸಾರ್ವಜನಿಕರಿಗೆ ಕೋವ್ಯಾಕ್ಸಿನ್ ಎರಡನೇ ಡೋಸ್ ಪಡೆಯಲು ಗೊಂದಲವಾಗುತ್ತಿರುವ ಕಾರಣ ಜಿಲ್ಲಾ ಆಸ್ಪತ್ರೆ ಆವರಣದಲ್ಲಿರುವ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಾರ್ಯಾಲಯದಲ್ಲಿ ಹೆಚ್ಚುವರಿಯಾಗಿ ಒಂದು ಕೋವ್ಯಾಕ್ಸಿನ್ ಲಸಿಕಾ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.

ಈ ಲಸಿಕಾ ಕೇಂದ್ರದಲ್ಲಿ ಕೋವ್ಯಾಕ್ಸಿನ್ ಎರಡನೇ ಡೋಸ್ ಲಸಿಕೆಯನ್ನು ಪಡೆಯಲು ಅರ್ಹವಿರುವ ಫಲಾನುಭವಿಗಳಿಗೆ ಮಾತ್ರ ನೀಡಲಾಗುತ್ತದೆ. ಅರ್ಹ ಫಲಾನುಭವಿಗಳು ಹೊಸದಾಗಿ ಸ್ಥಾಪಿಸಲಾದ ಈ ಲಸಿಕಾ ಕೇಂದ್ರಕ್ಕೆ ತೆರಳಿ ಕೋವ್ಯಾಕ್ಸಿನ್ ಲಸಿಕೆಯನ್ನು ಪಡೆಯಬೇಕು ಎಂದು ತಿಳಿಸಿದ್ದಾರೆ.

ವಿಜಯಪುರ ನಗರದಲ್ಲಿ ಈಗಾಗಲೇ ಕೋವಿಡ್ -19 ಲಸಿಕೆ ಅಭಿಯಾನದಡಿಯಲ್ಲಿ ನಗರ ಆರು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವಿವಿಧ ಹಂತಗಳಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಮುಂಚೂಣಿ ಕಾರ್ಯಕರ್ತರಿಗೆ ಹಾಗೂ 45 ವರ್ಷ ಮೇಲ್ಪಟ್ಟ ನಾಗರಿಕರಿಗೆ ಕೋವಿಶೀಲ್ಡ್ ಲಸಿಕೆಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕೋವ್ಯಾಕ್ಸಿನ್ ಎರಡನೇ ಡೋಸ್ ಲಸಿಕೆಯನ್ನು ಪಡೆಯಲು ನಗರ ಆರೋಗ್ಯ ಕೇಂದ್ರಗಳಿಗೆ ಇನ್ನು ಮುಂದೆ ಯಾರೂ ಹೋಗುವಂತಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು