ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌-19: ವಿಜಯಪುರದಲ್ಲಿ ಎಂಟು ಜನ ಗುಣಮುಖ

Last Updated 19 ಜೂನ್ 2020, 15:13 IST
ಅಕ್ಷರ ಗಾತ್ರ

ವಿಜಯಪುರ: ಕೋವಿಡ್‌-19ನಿಂದ ಶುಕ್ರವಾರ ಎಂಟು ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದರು.

ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ 238ಕ್ಕೆ ಏರಿಕೆಯಾಗಿದೆ. ಇದುವರೆಗೆ ಏಳು ಜನ ಸೋಂಕಿನಿಂದ ಸಾವಿಗೀಡಾಗಿದ್ದಾರೆ. 205 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 25 ಜನ ರೋಗಕ್ಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಪ್ಪು ಮಾಹಿತಿ:ಶುಕ್ರವಾರ ಸಂಜೆ ಬಿಡುಗಡೆಯಾದ ರಾಜ್ಯ ಹೆಲ್ತ್‌ ಬುಲೆಟಿನ್‌ನಲ್ಲಿ ವಿಜಯಪುರದಲ್ಲಿ ಕೋವಿಡ್‌ನಿಂದ ಸಾವಿಗೀಡಾದವ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ ಎಂದು ತಿಳಿಸಲಾಗಿತ್ತು.

ಈ ಕುರಿತು ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ, ಜಿಲ್ಲೆಯಲ್ಲಿ ಕೋವಿಡ್‌ನಿಂದ ಸಾವಿಗೀಡಾದವರ ಸಂಖ್ಯೆ ಎಂಟಲ್ಲ, ಏಳು ಮಾತ್ರ. ರಾಜ್ಯ ಬುಲೆಟಿನ್‌ನಲ್ಲಿ ಮಾಹಿತಿ ತಪ್ಪಾಗಿ ಮಾಹಿತಿ ಪ್ರಕಟವಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT