ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ | ಮಹಾರಾಷ್ಟ್ರದಿಂದ ಬಂದ ಆರು ಜನರಿಗೆ ಕೋವಿಡ್‌

Last Updated 26 ಮೇ 2020, 12:46 IST
ಅಕ್ಷರ ಗಾತ್ರ

ವಿಜಯಪುರ: ಮುಂಬೈ ಮತ್ತು ಸೊಲ್ಲಾಪುರರಿಂದ ಜಿಲ್ಲೆಗೆ ಬಂದಿರುವ ಆರು ಜನರಿಗೆ ಕೋವಿಡ್‌ ಸೋಂಕು ದೃಢಪಟ್ಟಿದೆ.

12 ವರ್ಷ ಬಾಲಕ, 17 ಮತ್ತು 18 ವರ್ಷ ವಯಸ್ಸಿನ ಇಬ್ಬರು ಯುವಕರು ಹಾಗೂ 30, 34 ಮತ್ತು 60 ವರ್ಷ ವಯಸ್ಸಿನ ಮೂವರು ಪುರುಷರಿಗೆ ಸೋಂಕು ಮಂಗಳವಾರ ದೃಢವಾಗಿದ್ದು, ಸೋಂಕಿತರು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇದ್ದರು.

ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ. ಈಗಾಗಲೇ ನಾಲ್ವರ ಮೃತಪಟ್ಟಿದ್ದು, 44 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇನ್ನುಳಿದ 27 ಜನರು ಕೋವಿಡ್‌ 19 ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಚಿವ ಜೊಲ್ಲೆ ಸಭೆ ಇಂದು
ವಿಜಯಪುರ:
ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡದಂತೆ ನಿಯಂತ್ರಿಸುವ ಕ್ರಮಗಳ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಹಾಗೂ ಜನಪ್ರತಿನಿಧಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಮೇ 27ರಂದು ಬೆಳಿಗ್ಗೆ 11ಕ್ಕೆ ನಗರದ ನೂತನ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಲಿದ್ದಾರೆ.

ಸಭೆಗೂ ಮುನ್ನಾ ಬೆಳಿಗ್ಗೆ 10ಕ್ಕೆ ಜಿಲ್ಲಾ ಪಂಚಾಯ್ತಿ ಸಭಾಂಗಣ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಗ್ರಿ ಕ್ರಾಪ್ ಕಂಪನಿ ವತಿಯಿಂದ ಒದಗಿಸಲಾಗುತ್ತಿರುವ ಪೌಷ್ಠಿಕ ಆಹಾರ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT