ಸೋಮವಾರ, ಆಗಸ್ಟ್ 2, 2021
26 °C

ಕೋವಿಡ್‌: ಸುರಕ್ಷಾ ನಿಯಮ ಪಾಲಿಸಲು ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಕೊರೊನಾ ವೈರಸ್‌ ಗಾಳಿಯಲ್ಲೂ ಹರಡುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಎಚ್ಚರಿಕೆ ನೀಡಿರುವುದರಿಂದ ಸಾರ್ವಜನಿಕರು ಸರ್ಕಾರ ರೂಪಿಸಿರುವ ಸುರಕ್ಷಾ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಸುನೀಲಗೌಡ ಪಾಟೀಲ್ ಮನವಿ ಮಾಡಿದ್ದಾರೆ.

ಅಂತರ್ ರಾಜ್ಯ, ಅಂತರ್ ಜಿಲ್ಲೆ ಮತ್ತು ವಿವಿಧ ಗ್ರಾಮಗಳಿಂದ ನಾನಾ ಕಾರಣಗಳಿಗಾಗಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುತ್ತಿದ್ದಾರೆ. ಇದರಿಂದ ಕಾಯಿಲೆ ಬಹು ಬೇಗ ಹರಡುವ ಸಾಧ್ಯತೆ ಇರುವುದರಿಂದ ಅನಗತ್ಯ ಸಂಚಾರವನ್ನು ಜನರು ನಿಲ್ಲಿಸಬೇಕು ಎಂದು ಹೇಳಿದ್ದಾರೆ.

ಕೋವಿಡ್‌ ಚಿಕಿತ್ಸೆ ನೀಡುತ್ತಿರುವ ವೈದ್ಯರಿಗೂ ಸಹ ಈ ಕಾಯಿಲೆ ಕಾಡುತ್ತಿದೆ. ಅಲ್ಲದೇ, ಈಗಾಗಲೇ ಅನೇಕ ಖಾಸಗಿ ಆಸ್ಪತ್ರೆಗಳು ಬಂದಾಗಿವೆ. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ವಾರ್ಡ್‍ಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಕೋವಿಡ್‌ನಿಂದ ಮುಂದಿನ ದಿನಗಳಲ್ಲಿ ಭಯಾನಕ ವಾತಾವರಣ ಸೃಷ್ಠಿಯಾಗುವ ಸಾಧ್ಯತೆ ಇದೆ. ಆದ್ದರಿಂದ ಸಾರ್ವಜನಿಕರು ಅನಗತ್ಯವಾಗಿ ಸಂಚರಿಸುವುದನ್ನು ನಿಲ್ಲಿಸಬೇಕು. ಕಡ್ಡಾಯವಾಗಿ ಅಂತರವನ್ನು ಕಾಪಾಡಬೇಕು. ಮಾಸ್ಕ್‌ ಧರಿಸುವುದು ಮತ್ತು ಸ್ಯಾನಿಟೈಸರ್ ಬಳಸುವುದು ಸೇರಿದಂತೆ ಅಗತ್ಯ ಸುರಕ್ಷಾ ಕ್ರಮಗಳನ್ನು ಅನುಸರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು