ಶುಕ್ರವಾರ, ಮಾರ್ಚ್ 31, 2023
32 °C

ವಿಜಯಪುರ: ಬಸ್‌ ಟಿಕೆಟ್‌ನಲ್ಲಿ ಕೋವಿಡ್‌ ಜಾಗೃತಿ ಸಂದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗವು ಬಸ್‌ ಪ್ರಯಾಣದ ಟಿಕೆಟ್‌ನಲ್ಲಿ ಕೋವಿಡ್‌ ಲಸಿಕೆ ಹಾಕಿಸಿಕೊಳ್ಳಲು ಹಾಗೂ ಮಾಸ್‌ ಧರಿಸಲು ಮತ್ತು ಸ್ಯಾನಿಟೈಜ್‌ ಬಳಸುವಂತೆ ಜಾಗೃತಿ ಮೂಡಿಸುವ ಸಂದೇಶ ಮುದ್ರಿಸಿದೆ.

ಈ ಕುರಿತು ಮಾಹಿತಿ ನೀಡಿದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ಜಿಲ್ಲೆಯಿಂದ ನೆರೆಯ ಮಹಾರಾಷ್ಟ್ರ, ಆಂಧ್ರಪ್ರದೇಶಗಳಿಗೆ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಗೆ ಪ್ರತಿದಿನ ನೂರಾರು ಬಸ್‌ಗಳು ಸಂಚರಿಸುತ್ತಿವೆ. ಸಾವಿರಾರು ಜನರು ಪ್ರಯಾಣಿಸುತ್ತಾರೆ. ಟಿಕೆಟ್‌ ಮೇಲೆ ಮುದ್ರಿಸಿರುವ ಕೋವಿಡ್‌ ಜಾಗೃತಿ ಸಂದೇಶವನ್ನು ಪ್ರತಿಯೊಬ್ಬರೂ ಓದುತ್ತಾರೆ. ಇದರಿಂದ ಜನರನ್ನು ಎಚ್ಚರಿಸಬಹುದಾಗಿ ಎಂದು ಹೇಳಿದರು.

ವಿಭಾಗದ ಕಾರ್ಯಕ್ಕೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು, ಅಧ್ಯಕ್ಷರು ಹಾಗೂ ವಿಜಯಪುರ ಜಿಲ್ಲಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ನಿಗಮದ ಇತರೆ ವಿಭಾಗಗಳಲ್ಲೂ ಟಿಕೆಟ್‌ ಮೇಲೆ ಕೋವಿಡ್ ಜಾಗೃತಿ ಸಂದೇಶ ಮುದ್ರಿಸುವಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಸೂಚಿಸಿದ್ದಾರೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು