ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಮನೆಗಳೇ ಮಿನಿ ಕಂಟೊನ್ಮೆಂಟ್‌ ಝೋನ್‌

ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚನೆ
Last Updated 5 ಮೇ 2021, 12:02 IST
ಅಕ್ಷರ ಗಾತ್ರ

ಇಂಡಿ: ಒಂದೇ ಮನೆಯಲ್ಲಿ ನಾಲ್ಕಕ್ಕಿಂತ ಹೆಚ್ಚು ಜನರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಲ್ಲಿ ಅಂತಹ ಮನೆಗಳನ್ನು ಮಿನಿ ಕಂಟೊನ್ಮೆಂಟ್‌ ವಲಯವನ್ನಾಗಿ ಪರಿಗಣಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಇಂಡಿ ಪಟ್ಟಣದ ಮಿನಿವಿಧಾನಸೌಧದ ಸಭಾ ಭವನದನಲ್ಲಿ ಕೋವಿಡ್-19 ಕುರಿತು ಅಧಿಕಾರಿಗಳು, ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ ಅತಿ ವೇಗವಾಗಿ ಕೊರೊನಾ ವೈರಸ್ ಹಬ್ಬುತ್ತಿದ್ದು, ಇದರ ನಿಯಂತ್ರಣಕಾಗಿ ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತ ಪ್ರಯತ್ನಿಸುತ್ತಿವೆ. ಪ್ರಸ್ತುತ ವಿಜಯಪುರ ಜಿಲ್ಲೆಯಲ್ಲಿ ಒಟ್ಟು 13,546 ಜನ ಕೋವಿಡ್ ಸೊಂಕಿತರಾಗಿದ್ದು, ಇದರಲ್ಲಿ ಇಂಡಿ ತಾಲ್ಲೂಕಿನಲ್ಲಿ 681 ಜನರಿಗೆ ಸೋಂಕು ತಗುಲಿದೆ. ಇವರು ವೈದ್ಯಕಿಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮೃತರ ಸಂಖ್ಯೆ ಶೇ 6 ರಷ್ಟಿದೆ. ಸದ್ಯ ತಾಲ್ಲೂಕಿನಲ್ಲಿ 362 ಜನ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಶೇ 98.89 ರಷ್ಟು ಜನ ಗುಣಮುಖರಾಗಿದ್ದಾರೆ. ತಾಲ್ಲೂಕಿನಲ್ಲಿ 324 ಸಕ್ರೀಯ ಪ್ರಕರಣಗಳಿವೆ. ಆದರೆ, ಏಪ್ರಿಲ್ ಮತ್ತು ಮೇನಲ್ಲಿ 9 ಜನ ಸೊಂಕಿತರು ಸಾವನ್ನಪ್ಪಿದ್ದಾರೆ ಎಂದರು.

ಇಂಡಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ 77 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, 45 ಜನರಿಗೆ ಆಕ್ಸಿಜನ್ ಬೆಡ್ ಒದಗಿಸಲಾಗಿದೆ. ಚಡಚಣ ಹಾಗೂ ತಡವಲಗಾ ಸಿಎಸ್‌ಸಿಗಳಲ್ಲಿ ಬೆಡ್ ವ್ಯವಸ್ಥೆ ಮಾಡಲು ಕ್ರಮಕೈಗೊಳ್ಳಲಾಗುತ್ತಿದೆ ಎಂದರು.

ಪ್ರತಿ ದಿನ ಜಿಲ್ಲೆಯಲ್ಲಿ 20 ಮೆಟ್ರಿಕ್‌ ಟನ್‌ ಆಮ್ಲಜನಕ ಅವಶ್ಯಕತೆ ಇದ್ದು, ಏಜನ್ಸಿ ಮೂಲಕ ಪೂರೈಕೆ ಮಾಡಲಾಗುತ್ತಿದೆ. ಇಂದು ವಿಜಯಪುರದಲ್ಲಿ 13 ಟನ್ ಆಮ್ಲಜನಕ ಬಂದಿದ್ದು, ರೆಮ್‌ಡಿಸಿವಿರ್ ಲಸಿಕೆ ಅಗತ್ಯಕ್ಕೆ ತಕ್ಕಂತೆ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಇಂಡಿಯ ಎಲ್ಲ ಖಾಸಗಿ ಆಸ್ಪತ್ರೆಗಳ ವೈದ್ಯರ ಸಭೆ ಕರೆದು ಕೋವಿಡ್ ರೋಗಿಗಳ ಆರೈಕೆಯಲ್ಲಿ ತೊಡಗಿಸಿಕೊಳ್ಳಲು ಉಪ ಕಂದಾಯ ವಿಭಾಗಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವೈದ್ಯಕಿಯ ಕಾಲೇಜು ವಿದ್ಯಾರ್ಥಿಗಳು ವೈದ್ಯಕೀಯ ಸೇವೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಇಂಡಿಯಲ್ಲಿ ಎರಡು ವೆಂಟಿಲೇಟರ್ ಇದ್ದು, ವೆಂಟಿಲೆಟರ್ ಅಳವಡಿಸಲು ಟೆಕ್ನಿಷಿಯನ್ ಇಲ್ಲ. ಹೀಗಾಗಿ ಜಿಲ್ಲೆಯಲ್ಲಿ ಅವಶ್ಯಕತೆ ಇದ್ದ ಆಸ್ಪತ್ರೆಗೆ ಎರಡೂ ವೆಂಟಿಲೆಟರ್ ಶಿಫ್ಟ್ ಮಾಡಲು ತಿಳಿಸಿದ್ದಾಗಿ ತಿಳಿಸಿದರು.

ಜನ ಜಾಗೃತರಾಗಿ ಕಡ್ಡಾಯವಾಗಿ ಮಾಸ್ಕ್‌ ಧರಿಸಿ ಪರಸ್ಪರ ಅಂತರ ಕಾಯ್ದುಕೊಳ್ಳುವ ಮೂಲಕ ಕೊರೊನಾ ವೈರಸ್ ತಡೆಗಟ್ಟಲು ಸಹಕರಿಸಬೇಕು ಎಂದು ಮನವಿ ಮಾಡಿದರು.

ಶಾಸಕ ಯಶವಂತರಾಯಗೌಡ ಪಾಟೀಲ, ವಿಧಾನ ಪರಿಷತ್‌ ಸದಸ್ಯ ಅರುಣ ಶಹಾಪುರ, ಲಿಂಬೆ ಅಭಿವೃದ್ದಿ ಮಂಡಳಿ ಅದ್ಯಕ್ಷ ಅಶೋಕ ಅಲ್ಲಾಪುರ, ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಅನುಪಮ್ ಅಗರವಾಲ, ಡಿಎಚ್ಒ ಮಹೇಂದ್ರ ಕಾಪಸೆ, ಉಪವಿಭಾಗಾಧಿಕಾರಿ ರಾಹುಲ ಸಿಂದೆ, ತಾಲ್ಲೂಕು ವೈದ್ಯಾಧಿಕಾರಿ ಅರ್ಚನಾ ಕುಲಕರ್ಣಿ, ಡಾ, ರಾಜೇಶ ಕೊಳೆಕರ ಇದ್ದರು.

***

ಇಂಡಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಅಗತ್ಯ ಬೆಡ್, ಆಕ್ಸಿಜನ್ ಮತ್ತು ವ್ಯಾಕ್ಸಿನ್‌ ಪೂರೈಕೆ ಮಾಡಬೇಕು. ವೈದ್ಯರು ಜನರಿಗೆ ಪರಿಣಾಮಕಾರಿಯಾದ ಚಿಕಿತ್ಸೆ ನೀಡಬೇಕು
–ಯಶವಂತರಾಯಗೌಡ ಪಾಟೀಲ್, ಶಾಸಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT