ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗಠಾಣದಲ್ಲಿ ಕೋವಿಡ್ ಆಸ್ಪತ್ರೆ ತೆರೆಯಲು ಆಗ್ರಹ

Last Updated 9 ಮೇ 2021, 11:09 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರಗಳ ಆಸ್ಪತ್ರೆಗಳಲ್ಲಿ ಕೋವಿಡ್‌ ಪೀಡಿತರಿಗೆ ಚಿಕಿತ್ಸೆ ಲಭಿಸುತ್ತಿದೆ. ಆದರೆ, ನಾಗಠಾಣ ಮತಕ್ಷೇತ್ರದಲ್ಲಿ ಯಾವುದೇ ಆಸ್ಪತ್ರೆ ಇಲ್ಲದೆ ಕ್ಷೇತ್ರದ ಜನರಿಗೆ ತೊಂದರೆಯಾಗಿದೆ. ಸರ್ಕಾರ ತಕ್ಷಣ ಕೋವಿಡ್‌ ಚಿಕಿತ್ಸೆ ನೀಡುವ ಸಂಬಂಧ ಆಸ್ಪತ್ರೆಯನ್ನು ಆರಂಭಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರೊ.ರಾಜು ಆಲಗೂರ ಒತ್ತಾಯಿಸಿದ್ದಾರೆ.

ಸರ್ಕಾರ ಮತ್ತು ಜಿಲ್ಲಾಡಳಿತ ಕೂಡಲೇ ಎಚ್ಚೆತ್ತುಕೊಂಡು, ತುರ್ತಾಗಿ ನಾಗಠಾಣ ಮತಕ್ಷೇತ್ರದ ಚಡಚಣ ತಾಲ್ಲೂಕು ಆಸ್ಪತ್ರೆಯಲ್ಲಿ ಹಾಗೂ ನಾಗಠಾಣ, ಶಿವಣಗಿ ಗ್ರಾಮಗಳಲ್ಲಿ ಕೋವಿಡ್ ಆಸ್ಪತ್ರೆ ಪ್ರಾರಂಭಿಸಬೇಕು ಮತ್ತು ಕೋವಿಡ್ ಕೇರ್‌ ಸೆಂಟರ್ ಪ್ರಾರಂಭಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ನಾಗಠಾಣ ಕ್ಷೇತ್ರದ ಕೋವಿಡ್ ಸೋಂಕಿತರು ಜಿಲ್ಲಾಸ್ಪತ್ರೆಯಲ್ಲಿ ಬೆಡ್, ಆಕ್ಸಿಜನ್ ಸಿಗದೇ ಪರದಾಡುತ್ತದ್ದಾರೆ. ಅನೇಕ ಬಡ ಜೀವಿಗಳು ತಮ್ಮ ಪ್ರಾಣವನ್ನು ಕಳೆದುಕೊಳ್ಳತ್ತಿದ್ದಾರೆ. ಆದ್ದರಿಂದ ಸರ್ಕಾರ ಕೂಡಲೇ ಕ್ರಮಕೈಗೊಳ್ಳಬೇಕು, ಇಲ್ಲವಾದರೆ ಸರ್ಕಾರವೇ ಮುಂದಿನ ಅನಾಹುತಗಳಿಗೆ ಹೊಣೆಯಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಕ್ಷೇತ್ರದ ಎಲ್ಲ ಗ್ರಾಮಗಳು ಸ್ಯಾನಿಟೈಜರ್ ಸಿಂಪಡಿಸಬಬೇಕು ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT