ಬುಧವಾರ, ಮೇ 12, 2021
27 °C
ಜೀವವಿಜ್ಞಾನ 1010, ಗಣಿತ 721 ಅಭ್ಯರ್ಥಿಗಳು ಗೈರು

ಸಿಇಟಿ ಬರೆದ ಕೋವಿಡ್‌ ಪಾಸಿಟಿವ್‌ ಅಭ್ಯರ್ಥಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ನಗರದ ಎಎಸ್‌ಪಿ ಕಾಮರ್ಸ್‌ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಗುರುವಾರ ಕೋವಿಡ್‌ ಪಾಟಿಸಿವ್‌ ಅಭ್ಯರ್ಥಿಯೊಬ್ಬರು ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬರೆದರು.

ಇಲ್ಲಿನ ಜೈನ್‌ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಸದ್ಯ ಚಿಕಿತ್ಸೆ ಪಡೆಯುತ್ತಿರುವ ಅಭ್ಯರ್ಥಿಯು ಪರೀಕ್ಷಾ ಕೇಂದ್ರಕ್ಕೆ ಬಂದು ಹೋಗಲು ಜಿಲ್ಲಾಡಳಿತದಿಂದ ಆಂಬುಲೆನ್ಸ್‌ ವ್ಯವಸ್ಥೆ ಮಾಡಲಾಗಿತ್ತು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಮೇಶ ದಡ್ಡಿ ‘ಪ್ರಜಾವಾಣಿ’ಗೆ ತಿಳಿಸಿದರು.

ಕೋವಿಡ್‌ ಪೀಡಿತ ಅಭ್ಯರ್ಥಿಗಳಿಗಾಗಿಯೇ ಪ್ರತ್ಯೇಕವಾದ ಪರೀಕ್ಷಾ ಕೇಂದ್ರ, ಒಬ್ಬ ವೈದ್ಯಾಧಿಕಾರಿ ಮತ್ತು ಪ್ಯಾರಾಮೆಡಿಕಲ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು ಎಂದು ಹೇಳಿದರು.

ಕೋವಿಡ್‌ ಮುಂಜಾಗೃತಿ: ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಪ್ರತಿಯೊಬ್ಬರಿಗೂ ಹ್ಯಾಂಡ್‌ ಸ್ಯಾನಿಟೈಜಿಂಗ್‌ ಮತ್ತು ಥರ್ಮಲ್‌ ಸ್ಕ್ರೀನಿಂಗ್‌ ಮಾಡಿದ ಬಳಿಕ ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಯಿತು. ಮಾಸ್ಕ್‌ ಧರಿಸಿದ್ದ ಅಭ್ಯರ್ಥಿಗಳು ಪರಸ್ಪರ ಅಂತರ ಕಾಯ್ದುಕೊಂಡು, ಜಿಗ್‌ಜಾಗ್‌ ಮಾದರಿಯಲ್ಲಿ ಕುಳಿತು ಪರೀಕ್ಷೆ ಬರೆದರು.

ಸಿಇಟಿ ಸುಲಲಿತ: ಜಿಲ್ಲೆಯ 17 ಪರೀಕ್ಷಾ ಕೇಂದ್ರಗಳಲ್ಲಿ ಗುರುವಾರ ಏಕಕಾಲಕ್ಕೆ ಸಿಇಟಿ ನಡೆಯಿತು. ಬೆಳಿಗ್ಗೆ ನಡೆದ ಜೀವವಿಜ್ಞಾನ ಪರೀಕ್ಷೆಗೆ 6879 ಅಭ್ಯರ್ಥಿಗಳು ಹಾಜರಾಗಿದ್ದರು. 1010 ಅಭ್ಯರ್ಥಿಗಳು ಗೈರಾಗಿದ್ದರು. ಅದೇ ರೀತಿ ಮಧ್ಯಾಹ್ನ ನಡೆದ ಗಣಿತ ಪರೀಕ್ಷೆಯಲ್ಲಿ 7168 ಹಾಜರಿ, 721 ಅಭ್ಯರ್ಥಿಗಳು ಗೈರಾಗಿದ್ದರು ಎಂದು ತಿಳಿಸಿದರು.

ಜುಲೈ 31 ಮತ್ತು ಆಗಸ್ಟ್‌ 1ರಂದು ಸಿಇಟಿ ನಡೆಯಲಿದೆ ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು