ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಲಸಿಕೆ ಕೊರತೆ ನೀಗಿಲು ಕ್ರಮ: ಜೊಲ್ಲೆ

ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್-19 ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ
Last Updated 13 ಮೇ 2021, 12:54 IST
ಅಕ್ಷರ ಗಾತ್ರ

ವಿಜಯಪುರ: ಕೋವಿಡ್-19 ನಿಯಂತ್ರಣದಲ್ಲಿ ಯಾವುದೇ ಫಲಾಪೇಕ್ಷೆ ಇಲ್ಲದೆ ಕಾರ್ಯನಿರ್ಹಿಸುತ್ತಿರುವ ಮಾಧ್ಯಮ ಪ್ರತಿನಿಧಿಗಳ ಕಾರ್ಯ ಅನನ್ಯ ಮತ್ತು ಪ್ರಶಂಸಾರ್ಹವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಜಿಲ್ಲಾ ಆಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಜಿಲ್ಲಾ ಕೇಂದ್ರದ ಮಾಧ್ಯಮ ಪ್ರತಿನಿಧಿಗಳಿಗಾಗಿಆಯೋಜಿಸಲಾಗಿದ್ದ ನಗರದಲ್ಲಿ ಗುರುವಾರ ಏರ್ಪಡಿಸಿದ್ದ ಕೋವಿಡ್-19 ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕಳೆದ ಒಂದೂವರೆ ವರ್ಷಗಳಿಂದ ಕೋವಿಡ್-19 ನಿಯಂತ್ರಣದಲ್ಲಿ ಮಾಧ್ಯಮ ಪ್ರತಿನಿಧಿಗಳು ಸರ್ಕಾರದ ಜೊತೆಗೆ ಕೈಜೋಡಿಸಿದ್ದಾರೆ. ಇದಕ್ಕಾಗಿ ಸರ್ಕಾರ ಮಾಧ್ಯಮ ಪ್ರತಿನಿಧಿಗಳನ್ನು ಫ್ರಂಟ್‌ಲೈನ್‌ ವಾರಿಯರ್ಸ್‌ಗಳಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ ಆದ್ಯತೆ ಮೇರೆಗೆ ಕೋವಿಡ್‌ ಲಸಿಕೆ ನೀಡಲಾಗುತ್ತಿದೆ ಎಂದು ಹೇಳಿದರು.

ಕೋವಿಡ್-19 ಲಸಿಕೆ ನೀಡುವುದರಿಂದ ಅಡ್ಡಪರಿಣಾಮ ಆಗುತ್ತದೆ ಎಂಬ ಭಯ ಸಾರ್ವಜನಿಕರಲ್ಲಿದ್ದು, ಈ ಭಯವನ್ನು ಹೋಗಲಾಡಿಸಲು ಮತ್ತು ಈ ಲಸಿಕೆಯಿಂದ ಯಾವುದೇ ಸಮಸ್ಯೆ ಇಲ್ಲ ಎಂಬುವುದನ್ನು ತಿಳಿಹೇಳುವ ದಿಸೆಯಲ್ಲಿ ಹಾಗೂ ಲಸಿಕೆ ಪಡೆಯಲು ಪ್ರೇರಣೆಗಾಗಿ ಮಾಧ್ಯಮ ಪ್ರತಿನಿಧಿಗಳಿಗೆ ಲಸಿಕಾ ಕಾರ್ಯಕ್ರಮ ಆಯೋಜಿಸಿ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಹೇಳಿದರು.

ಜಿಲ್ಲೆಗೆ ಗುರುವಾರ ಮತ್ತೆ 14 ಸಾವಿರ ಕೋವಿಡ್‌ ವ್ಯಾಕ್ಸಿನ್‌ ಬಂದಿದೆ. ಜಿಲ್ಲೆಯಲ್ಲಿ ಕೋವಿಡ್‌ ಲಸಿಕಾ ಅಭಿಯಾನಕ್ಕೆ ತೊಂದರೆಯಾಗದಂತೆ ಲಸಿಕೆ ತರಿಸಲು ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದರು ತಿಳಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಫ್‌ಡಿಎ ಚಂದ್ರಕಲಾ ಜೋಶಿ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಲಸಿಕಾ ಕಾರ್ಯಕ್ರಮದಲ್ಲಿ 45ಕ್ಕೂ ಹೆಚ್ಚು ಮಾಧ್ಯಮ ಪ್ರತಿನಿಧಿಗಳಿಗೆ ಪ್ರಥಮ ಹಂತದ ಲಸಿಕೆ ನೀಡಲಾಯಿತು.

ವಿಧಾನಪರಿಷತ್ ಸದಸ್ಯ ಅರುಣ್ ಶಹಾಪುರ, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ್, ನಿಂಬೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಶೋಕ ಅಲ್ಲಾಪುರ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಶ್ರೀಹರಿ ಗೊಳಸಂಗಿ. ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣ ಅಧಿಕಾರಿ ಗೋವಿಂದರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷ ಶೆಟ್ಟಿ, ಉಪವಿಭಾಗಾಧಿಕಾರಿ ಬಾಬು ಲಮಾಣಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಂದ್ರ ಕಾಪಸೆ, ಜಿಲ್ಲಾ ಆರ್ ಸಿ ಎಚ್ ಅಧಿಕಾರಿ ಡಾ.ನಾಗರಬೆಟ್ಟ. ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಎಂ.ಬಿ. ಬಿರಾದರ, ಪತ್ರಕರ್ತ ಸಂಘದ ಅಧ್ಯಕ್ಷ ಸಚಿಂದ್ರ ಲಂಬು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಸುಲೇಮಾನ್ ನದಾಫ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT