ವಿಜಯಪುರ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಜಯಪುರ ಘಟಕದ 18 ರಿಂದ 44 ವರ್ಷ ವಯೋಮಾನದ ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ಕೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಶನಿವಾರ ನಗರದ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣನಪ್ಪ ಕುರುಬರ, ಸಾರಿಗೆ ಸಿಬ್ಬಂದಿ ಮುಂಚೂಣಿಯಲ್ಲಿ ಇದ್ದು ಕೆಲಸಗಳನ್ನು ನಿರ್ವಹಿಸುತ್ತಿರುವುದರಿಂದ ಸರ್ಕಾರ ಅವರಿಗೆ ಲಸಿಕೆ ಹಾಕಿಸಿಕೊಳ್ಳುವ ಅವಕಾಶ ಮಾಡಿದೆ. ಎಲ್ಲ ಸಿಬ್ಬಂದಿ ಸರ್ಕಾರದ ಮಾರ್ಗಸೂಚಿಯಂತೆ ಸುರಕ್ಷಿತ ಕ್ರಮತೆಗೆದುಕೊಳ್ಳಬೇಕು ಎಂದು ಅವರು ತಿಳಿಸಿದರು.

ಸಂಸ್ಥೆಯ ವಿಜಯಪುರ ವಿಭಾಗದ 100 ಸಿಬ್ಬಂದಿಗೆ ಲಸಿಕೆ ಹಾಕುವ ಕಾರ್ಯಾಕ್ರಮಕ್ಕೆ ಚಾಲನೆ ನೀಡಲಾಗಿದೆ. ಈಗಾಗಲೇ ಒಟ್ಟು 1031 ಸಿಬ್ಬಂದಿ ಲಸಿಕೆ ಹಾಕಿಸಿಕೊಂಡಿರುವುದಾಗಿ ಅವರು ಎಂದು ಹೇಳಿದರು.

ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ ಅಗರವಾಲ್, ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಹೇಂದ್ರ ಕಾಪಸೆ, ಜಿಲ್ಲಾ ಆರ್.ಸಿ .ಎಚ್ ಅಧಿಕಾರಿ ಡಾ. ಮಹೇಶ ನಾಗರಬೆಟ್ಟ, ಡಾ.ಲಕ್ಕಣ್ಣವರ್, ಡಾ.ಗಲಗಲಿ, ಡಾ ಬಿರಾದಾರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.