ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

18-44 ವರ್ಷದವರಿಗೆ ಕೋವಿಡ್ ಲಸಿಕೆ ಪ್ರಾರಂಭ

ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಹೇಳಿಕೆ
Last Updated 11 ಮೇ 2021, 15:14 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯಲ್ಲಿ 18 ರಿಂದ 44 ವರ್ಷದವರಿಗೆ ಸೋಮವಾರದಿಂದ ಆರಂಭಗೊಂಡು ಮೇ 17ರ ವರೆಗೆ ವಿಜಯಪುರ ಜಿಲ್ಲಾ ಆಸ್ಪತ್ರೆ, ಬಸವನ ಬಾಗೇವಾಡಿ, ಇಂಡಿ, ಸಿಂದಗಿ ಮತ್ತು ಮುದ್ದೇಬಿಹಾಳದ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರತಿದಿನ ಒಂದು ಕೇಂದ್ರದಲ್ಲಿ 150 ಜನರಿಗೆ ಮಾತ್ರ ಕೋವಿಡ್‌ ಲಸಿಕೆಯನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.

ಲಸಿಕೆ ಪಡೆಯಲು ಅರ್ಹವಿರುವ ಫಲಾನುಭವಿಗಳು ಆನ್ ಲೈನ್‌ನಲ್ಲಿ ನೋಂದಣಿ ಮಾಡಿ, ಆಯಾ ದಿನಾಂಕಗಳಂದು ಆನ್ ಲೈನ್ ಲಭ್ಯತೆಯ ವೇಳಾಪಟ್ಟಿಯಂತೆ ಲಸಿಕಾ ಕೇಂದ್ರವನ್ನು ಬುಕ್ ಮಾಡಿಕೊಂಡು ಹೋಗಿ ಲಸಿಕೆ ಪಡೆಯಬೇಕು ಎಂದು ಸೂಚಿಸಿದ್ದಾರೆ.

ಸರ್ಕಾರದ ಮಾರ್ಗಸೂಚಿಯಂತೆ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಂಡು ಬಂದವರಿಗೆ ಮಾತ್ರ ಲಸಿಕೆಯನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈಗಾಗಲೇ ಕೋವಿಡ್-19 ಲಸಿಕೆ ಅಭಿಯಾನದಡಿಯಲ್ಲಿ ವಿವಿಧ ಹಂತಗಳಲ್ಲಿ ಆರೋಗ್ಯ ಕಾರ್ಯಕರ್ತರಿಗೆ, ಮುಂಚೂಣಿ ಕಾರ್ಯಕರ್ತರಿಗೆ ಹಾಗೂ 45 ವರ್ಷ ಮೇಲ್ಪಟ್ಟ ನಾಗರಿಕರಿಗೆ ಲಸಿಕೆಯನ್ನು ನೀಡಲಾಗುತ್ತಿದೆ ಎಂದು ಹೇಳಿದರು.

ಮೇ 6 ರಿಂದ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಎರಡನೇಯ ಡೋಸ್ ಪಡೆಯಲು ಅರ್ಹವಿರುವ ಆರೋಗ್ಯ ಕಾರ್ಯಕರ್ತರಿಗೆ, ಮುಂಚೂಣಿ ಕಾರ್ಯಕರ್ತರಿಗೆ ಹಾಗೂ 45 ವರ್ಷ ಮೇಲ್ಪಟ್ಟ ನಾಗರಿಕರಿಗೆ ಆದ್ಯತೆಯನ್ನು ನೀಡಲಾಗುತ್ತಿದೆ. ಆದ ಕಾರಣ 2 ನೇ ಡೋಸ್‌ಗೆ ಅರ್ಹವಿರುವ ಫಲಾನುಭವಿಗಳು ಎಂದಿನಂತೆ ಜಿಲ್ಲೆಯಲ್ಲಿನ, ಜಿಲ್ಲಾ ಆಸ್ಪತ್ರೆ, ಎಲ್ಲ ತಾಲ್ಲೂಕು ಆಸ್ಪತ್ರೆ, ಎಲ್ಲ ಸಮುದಾಯ ಆರೋಗ್ಯ
ಕೇಂದ್ರಗಳು, ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಎಲ್ಲ ನಗರ ಆರೋಗ್ಯ ಕೇಂದ್ರಗಳಿಗೆ ತೆರಳಿ ಲಸಿಕೆಯನ್ನು
ಪಡೆಯಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಿಗೆ ರೆಮ್ ಡಿಸಿವಿರ್ ಹಂಚಿಕೆ

ವಿಜಯಪುರ: ಕೋವಿಡ್-19 ಚಿಕಿತ್ಸೆ ನೀಡುತ್ತಿರುವ ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳಿಗೆ ಹಾಗೂ ಅಲ್ಲಿ ಚಿಕಿತ್ಸೆ ಕೋವಿಡ್ ರೋಗಿಗಳ ಸಂಖ್ಯೆಗೆ ಅನುಗುಣವಾಗಿ ನೇರವಾಗಿ ಆಯಾ ಖಾಸಗಿ ಆಸ್ಪತ್ರೆಗಳಿಗೆ ರೆಮ್ ಡಿಸಿವಿರ್ ಹಂಚಿಕೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.

ಜಿಲ್ಲಾಡಳಿತದಿಂದ ಹಂಚಿಕೆಯಾದ ರೆಮ್‌ಡಿಸಿವಿರ್‌ ಔಷಧವನ್ನು ಖಾಸಗಿ ಆಸ್ಪತ್ರೆಗಳ ವೈದ್ಯರು ಯಾವುದೇ ಕಾರಣಕ್ಕೂ ದುರ್ಬಳಕೆಯಾಗದಂತೆ ನೋಡಿಕೊಳ್ಳಬೇಕು. ಈಗಾಗಲೇ ರೆಮಿಡಿಸಿವರ್ ಔಷಧಿಯನ್ನು ದುರುಪಯೋಗಪಡಿಸಿಕೊಂಡವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದರು.

ಸೋಮವಾರ ಜಿಲ್ಲೆಗೆ ಬಿಡುಗಡೆಯಾದ 2054 ರೆಮ್‌ಡಿಸಿವರ್ ಇಂಜೆಕ್ಷನ್‌ ಅನ್ನು ಖಾಸಗಿ ಆಸ್ಪತ್ರೆಗಳಿಗೆ ಹಂಚಿಕೆ ಮಾಡಲಾಗಿದೆ ಎಂದರು.

ಜಿಲ್ಲೆಗೆ ಅವಶ್ಯಕವಿರುವ ರೆಮ್ ಡಿಸಿವಿರ್ ಔಷಧವನ್ನು ಪಡೆಯುವ ಕುರಿತು ಹಗಲಿರುಳು ಜಿಲ್ಲಾಡಳಿತ ಶ್ರಮಿಸಲಾಗುತ್ತಿದೆ ಎಂದು ಹೇಳಿದರು.

ಸಾರ್ವಜನಿಕರು, ವೈದ್ಯಾಧಿಕಾರಿಗಳು ಕೋವಿಡ್ -19 ರ ನಿಯಂತ್ರಣದಲ್ಲಿ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಜಿಲ್ಲಾಡಳಿತದಿಂದ ಸಹಾಯವಾಣಿ ಕೇಂದ್ರ

ವಿಜಯಪುರ: ಜಿಲ್ಲೆಯ ಎಲ್ಲ ಸಾರ್ವಜನಿರಕರಿಗೆ ಖಾಸಗಿ ಆಸ್ಪತ್ರೆಗಳ ಮಾಹಿತಿ, ವೈದ್ಯಕೀಯ ಆಕ್ಸಿಜನ್ ಪೂರೈಕೆ ಮತ್ತು ಕೋವಿಡ್-19 ರ ಮತ್ತು ಇತರೆ ಮಾಹಿತಿಗಳ ಅನುಕೂಲಕ್ಕಾಗಿ ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್‌ ತಿಳಿಸಿದ್ದಾರೆ.

ಈ ಕೆಳಕಾಣಿಸಿದ ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಸಾರ್ವಜನಿಕರು, ಆಸ್ಪತ್ರೆಗಳು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.

ವೈದ್ಯಕೀಯ ಆಕ್ಸಿಜನ್ ಪೂರೈಕೆ ಕುರಿತು 1077( ಟೋಲ್ ಫ್ರೀ ನಂಬರ್ ), ದೂ.ಸಂ (08352-222101) ಗೆ ಹಾಗೂ
ಆಸ್ಪತ್ರೆಗಳಲ್ಲಿನ ಬೆಡ್ ಗಳ ಲಭ್ಯತೆ ಕುರಿತು 1077 (ಟೋಲ್ ಫ್ರೀ ನಂಬರ್) ದೂ.ಸಂ.(08352-222102,221261) ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT