ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ವಾರಿಯರ್ಸ್‌ ಕಾಯಂಗೆ ಆಗ್ರಹ

Last Updated 4 ಜುಲೈ 2020, 14:25 IST
ಅಕ್ಷರ ಗಾತ್ರ

ವಿಜಯಪುರ: ಕೋವಿಡ್‌ ಮುಂಚೂಣಿ ವಾರಿಯರ್ಸ್‍ರನ್ನು ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಕೇಂದ್ರ ಕಾರ್ಮಿಕ ಸಂಘಟನೆಗಳಾದ ಎಐಟಿಯುಸಿ ಸಿಐಟಿಯು, ಎಐಯುಟಿಯುಸಿ, ಎಸ್‍ಐಎಫ್‍ಟಿ, ಬ್ಯಾಂಕ್‌ ನೌಕರರ ಸಂಘ, ಗ್ರಾಮ ಪಂಚಾಯ್ತಿ ನೌಕರರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಮುಖಂಡರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.

ಯೋಜನಾ ನೌಕರರಿಗೆ ಕೋವಿಡ್‌ ಕೆಲಸದ ಪ್ರೋತ್ಸಾಹ ಧನ ನೀಡಬೇಕು, ಉದ್ಯೋಗ ಖಾತ್ರಿ ಯೋಜನೆಯನ್ನು 200 ದಿನಗಳಿಗೆ ನಗರಗಳಿಗೆ ವಿಸ್ತರಿಸಿ ವಲಸೆ ಕಾರ್ಮಿಕರಿಗೂ ಅನ್ವಯಿಸಬೇಕು, ಲಾಕ್ ಡೌನ್ ಸಂದರ್ಭದ ವೇತನವನ್ನು ಸಂಪೂರ್ಣ ಪಾವತಿಸಿ, ಪೂರ್ಣ ವೇತನದೊಂದಿಗೆ ಕೆಲಸ ಕೊಡಬೇಕು, ಎಲ್ಲ ಕಾರ್ಮಿಕರಿಗೆ ಕನಿಷ್ಠ ಆರು ತಿಂಗಳವರೆಗೆ ಪಡಿತರವನ್ನು ಒದಗಿಸಬೇಕು, ಖಾಸಗೀಕರಣದ ನಡೆ ಕೈಬಿಡಬೇಕು, ವಿದ್ಯುತ್ ತಿದ್ದುಪಡಿ ಮಸೂದೆ 2020 ಅನ್ನು ಕೈಬಿಡಬೇಕು, ಕಾರ್ಮಿಕ ಕಾನೂನುಗಳನ್ನು ಬದಲಾಯಿಸಬಾರದು, ರಾಷ್ಟ್ರೀಕೃತ ಬ್ಯಾಂಕುಗಳನ್ನು ಖಾಸಗಿಕರಣ ಮಾಡಬಾರದು ಎಂದು ಆಗ್ರಹಿಸಿದರು.

ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಭೀಮಶಿ ಕಲಾದಗಿ, ಬ್ಯಾಂಕ್‌ ನೌಕರರ ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಿ.ಜಿ. ಗಾಂಧಿ, ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಸುನೀಲ ಸಿದ್ರಾಮಶೆಟ್ಟಿ, ಎಸ್‍ಐಎಫ್‍ಟಿ ಜಿಲ್ಲಾ ಅಧ್ಯಕ್ಷ ಪ್ರಭುಗೌಡ ಪಾಟೀಲ, ಸಿಐಟಿಯು ಪ್ರಧಾನ ಕಾರ್ಯದರ್ಶಿ ಲಕ್ಷಣ ಹಂದ್ರಾಳ, ಎಐಟಿಯುಸಿ ಜಿಲ್ಲಾ ಸಮಿತಿ ಸದಸ್ಯರು ಘಂಟೆಪ್ಪಗೋಳ, ವಿಠಲ ವನಮೋರೆ, ಗ್ರಾಮ ಪಂಚಾಯ್ತಿ ನೌಕರರ ಸಂಘ ಎಸ್.ಎಸ್.ಆನಂದಶೆಟ್ಟಿ, ಸಿದ್ರಾಮ ಬಂಗಾರಿ, ಸುರೇಖಾ ಶಿವಣಗಿ, ರೇವಣಸಿದ್ದ ಬಿರಾದಾರ, ರಮೇಶ ಕೊತನೂರ, ಮಹಾದೇವ ಜೊಲ್ಲೆ, ಅನಿತಾ ರಾಥೋಡ, ಶಿವಮ್ಮ ನಾಡವರ, ಸಂತೋಷ ಕೋಹಳ್ಳಿ, ಲಾಲಸಾಬ ಕೊರಬು, ಸಂಗಿತಾ ಪೂಜಾರಿ, ಮಾಬುಬಿ ಪಾಂಡುಗೋಳ, ಅಂಬು ಗೊಗರೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT