ಶುಕ್ರವಾರ, ಜೂನ್ 25, 2021
22 °C

ಕೋವಿಡ್‌ನಿಂದ ಮಹಿಳಾ ಪಿಎಸ್‌ಐ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಇಲ್ಲಿನ ಆದರ್ಶ ನಗರ ಪೊಲೀಸ್ ಠಾಣೆಯ ಮಹಿಳಾ ಪಿಎಸ್ಐ ಸುಲೋಚನಾ ಭಜಂತ್ರಿ(45) ಕೋವಿಡ್‌ನಿಂದ ಸೋಮವಾರ ನಿಧನರಾಗಿದ್ದಾರೆ.

ಬೆಳಗಾವಿ ಉಪ ಚುನಾವಣೆ ಕರ್ತವ್ಯ ಮುಗಿಸಿಕೊಂಡು, ಈಚೆಗೆ ವಾಪಸ್ಸಾಗಿದ್ದರು. ಭಾನುವಾರ ಏಕಾಏಕಿ ಉಸಿರಾಟ ತೊಂದರೆಯಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಅವರಿಗೆ ಪತಿ, ಒಬ್ಬ ಪುತ್ರ, ಒಬ್ಬ ಪುತ್ರಿ ಇದ್ದಾರೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಮಪ್‌ ಅಗರವಾಲ್‌ ಅವರು ಭಜಂತ್ರಿ ಅವರ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದು, ಸರ್ಕಾರದಿಂದ ಸೂಕ್ತ ಪರಿಹಾರವನ್ನು ಅವರ ಕುಟುಂಬಕ್ಕೆ ಒದಗಿಸಲು ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು