ವಿಜಯಪುರ: ಕೋವಿಡ್‌ನಿಂದ ಬಳಲುತ್ತಿದ್ದ ನಗರದ ನವಭಾಗ ನಿವಾಸಿ, 26 ವರ್ಷದ ಯುವಕ (ಪಿ25,349) ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.

ಕೆಮ್ಮು, ಜ್ವರ ಹಾಗೂ ತೀವ್ರ ಉಸಿರಾಟ ತೊಂದರೆಯಿಂದ ಬಳಲಿ ಜುಲೈ 6 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರ ಗಂಟಲು ದ್ರವವನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿ, ಕೋವಿಡ್ ಸೋಂಕು ಇರುವುದು ದೃಢಪಟ್ಟಿತ್ತು.

14 ಪೊಲೀಸರಿಗೆ ಕೋವಿಡ್: ಜಿಲ್ಲೆಯ ಕಂಟೈನ್ಮೆಂಟ್ ವಲಯದಲ್ಲಿ, ಕೋವಿಡ್ ಆಸ್ಪತ್ರೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಣೆ ಮಾಡಿದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ 5, ಗಾಂಧಿ ಚೌಕ ಪೊಲೀಸ್ ಠಾಣೆಯ 6, ವಿಜಯಪುರ ಉಪವಿಭಾಗ ಕಚೇರಿಯ 2, ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯ ಒಬ್ಬರು ಸೇರಿದಂತೆ ಒಟ್ಟು 14 ಜನರಿಗೆ ಸೋಂಕು ತಗುಲಿರುವ ಬಗ್ಗೆ ಧೃಡಪಟ್ಟಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ತಿಳಿಸಿದ್ದಾರೆ.

ಮಹಾನಗರ ಪಾಲಿಕೆಯ 18 ಜನರಲ್ಲಿ ಹಾಗೂ ಇಂಡಿಯ ಮೂವರು ಆರೋಗ್ಯ ಕಾರ್ಯಕರ್ತರು ಹಾಗೂ ಜಲ ಮಂಡಳಿಯರ ಇಬ್ಬರು ಕೆಲಸಗಾರರಿಗೂ ಸೋಂಕು ತಗುಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಪೊಲೀಸ್, ಜಲಮಂಡಳಿ ಹಾಗೂ ಆರೋಗ್ಯ ಕಾರ್ಯಕರ್ತರಿಗೂ ಕೋವಿಡ್ ಸೋಂಕು ತಗುಲಿದ್ದರ ಹಿನ್ನೆಲೆಯಲ್ಲಿ ಆಯಾ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸೂಕ್ತ ಸ್ಯಾನಿಟೈಜೇಶನ್‌ಗೆ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.