ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಕ್ರಿಕೆಟ್‌ ಬೆಟ್ಟಿಂಗ್, ಮೂವರ ಬಂಧನ

Last Updated 30 ಸೆಪ್ಟೆಂಬರ್ 2020, 13:18 IST
ಅಕ್ಷರ ಗಾತ್ರ

ವಿಜಯಪುರ: ಇಂಡಿ ಪಟ್ಟಣದಲ್ಲಿ ಐಪಿಎಲ್‌ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಡಿಸಿಐಬಿ ಪೊಲೀಸ್ ಇನ್‌ಸ್ಪೆಕ್ಟರ್‌ ಸಿ.ಬಿ ಬಾಗೇವಾಡಿ ಹಾಗೂ ಸಿಬ್ಬಂದಿಯನ್ನೊಳಗೊಂಡ ತಂಡವು ದಾಳಿ ಮಾಡಿ, ಇಂಡಿ ಪಟ್ಟಣದ ಪಂಚಶೀಲ ನಗರದ ಶಿವಪುತ್ರ ಬಗಲಿ(31), ಸಾಯಬಣ್ಣ ಮೂರಮನ(34) ಮತ್ತು ಬೀರಪ್ಪ ನಗರದ ಚಂದ್ರಕಾಂತ ಪಾಟೀಲ್(24) ಎಂಬುವವರನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ ₹3 ಲಕ್ಷ ನಗದು, 10 ಮೊಬೈಲ್‌ ಫೋನ್‌, ಒಂದು ಟಿ.ವಿ.ಯನ್ನು ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಮಪ್‌ ಅಗರವಾಲ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT