ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿದ ಮತ್ತಿನಲ್ಲಿ ಪತ್ನಿಯ ಮೇಲೆ ಕುಡುಗೋಲಿನಿಂದ ಹಲ್ಲೆ

Published 28 ಏಪ್ರಿಲ್ 2024, 4:34 IST
Last Updated 28 ಏಪ್ರಿಲ್ 2024, 4:34 IST
ಅಕ್ಷರ ಗಾತ್ರ

ಮುದ್ದೇಬಿಹಾಳ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಪತ್ನಿಗೆ ಕುಡುಗೋಲಿನಿಂದ ಕೊಚ್ಚಿದ ಘಟನೆ ಪಟ್ಟಣದ ತಾಳಿಕೋಟ ರಸ್ತೆಯ ಓಸ್ವಾಲ್ ಸಾ ಮಿಲ್ ಎದುರು ಶನಿವಾರ ಬೆಳಿಗ್ಗೆ ನಡೆದಿದೆ.

ತರಕಾರಿ ಮಾರಾಟ ಮಾಡಿ ಜೀವನ ನಡೆಸುತ್ತಿದ್ದ ತಾಲ್ಲೂಕಿನ ಕಾಳಗಿ ಗ್ರಾಮದ ಯಲ್ಲಮ್ಮ ಸಿದ್ದಪ್ಪ ಕಾಳಗಿ (32) ಹಲ್ಲೆಗೊಳಗಾದವರು.

ಕುಡಿತದ ಚಟ ಹೊಂದಿದ್ದ ಸಿದ್ದಪ್ಪ ಕಾಳಗಿ ಸದಾ ಪತ್ನಿಯೊಂದಿಗೆ ಜಗಳವಾಡುತ್ತಿದ್ದ. ಇದರಿಂದ ಬೇಸತ್ತಿದ್ದ ಯಲ್ಲಮ್ಮ ಎರಡು ವರ್ಷಗಳಿಂದ ಪತಿಯಿಂದ ದೂರವಿದ್ದರು. ಸಹೋದರಿ ರೇಣುಕಾ ಅವರೊಂದಿಗೆ ಮುದ್ದೇಬಿಹಾಳ ಆಶ್ರಯ ಕಾಲೊನಿಯಲ್ಲಿ ತರಕಾರಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ಶನಿವಾರ ಪತ್ನಿಯೊಂದಿಗೆ ಜಗಳವಾಡಿದ ಸಿದ್ದಪ್ಪ ಕುಡುಗೋಲಿನಿಂದ ಪತ್ನಿಯ ಕತ್ತಿನ ಬಳಿ ಹೊಡೆದ. ಅಸ್ವಸ್ಥಗೊಂಡ ಯಲ್ಲಮ್ಮ ಅವರನ್ನು ಇಲ್ಲಿಯ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಸೇರಿಸಿ, ಹೆಚ್ಚಿನ ಚಿಕಿತ್ಸೆಗೆಂದು ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪಿಎಸ್‌ಐ ಸಂಜಯ ತಿಪರೆಡ್ಡಿ ಮಾಹಿತಿ ನೀಡಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT